Select Your Language

Notifications

webdunia
webdunia
webdunia
webdunia

ತೆಲಂಗಾಣದಲ್ಲಿ ಭಾರೀ ರೈಲು ದುರಂತ

train

Krishnaveni K

ಹೈದರಾಬಾದ್ , ಬುಧವಾರ, 10 ಜನವರಿ 2024 (11:50 IST)
ಹೈದರಾಬಾದ್: ತೆಲಂಗಾಣದ ನಾಂಪಲ್ಲಿಯಲ್ಲಿ ಚಾರ್ ಮಿನಾರ್ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ್ದು, ಪರಿಣಾಮ ಹಲವರು ಗಾಯಗೊಂಡಿರುವುದಾಗಿ ವರದಿಯಾಗಿದೆ.

ನಾಂಪಲ್ಲಿ ರೈಲು ನಿಲ್ದಾಣದ ಬಳಿ ದುರಂತ ಸಂಭವಿಸಿದೆ. ಮೂರು ಭೋಗಿಗಳು ಹಳಿ ತಪ್ಪಿ ಪಕ್ಕದ ಗೋಡೆಗೆ ಢಿಕ್ಕಿ ಹೊಡೆದಿದೆ. ಪರಿಣಾಮ 50 ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ.

ಗಾಯಾಳುಗಳನ್ನು ಲಾಲಾಗುಡಾ ರೈಲ್ವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನೈನಿಂದ ಹೈದರಾಬಾದ್ ಗೆ ಬರುತ್ತಿದ್ದ ಚಾರ್ ಮಿನಾರ್ ಎಕ್ಸ್ ಪ್ರೆಸ್ ನಾಂಪಲ್ಲಿ ನಿಲ್ದಾಣದ ಬಳಿ ಹಳಿ ತಪ್ಪಿದೆ. ರೈಲು ಈ ಸಂದರ್ಭದಲ್ಲಿ ನಿಧಾನಗತಿಯಲ್ಲಿದ್ದು, ಕೆಲವರು ಆಗಲೇ ಇಳಿದಾಗಿತ್ತು. ಹೀಗಾಗಿ ಭಾರೀ ದುರಂತ ತಪ್ಪಿದೆ.

ತಕ್ಷಣವೇ ರೈಲ್ವೇ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಗಾಯಗೊಂಡವರ ಪರಿಸ್ಥಿತಿ ಗಂಭೀರವಾಗಿಲ್ಲ ಎಂದು ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಯೋಧ್ಯೆಯಲ್ಲಿ ತಲೆ ಎತ್ತಲಿದೆ ಕರ್ನಾಟಕದ ಅತಿಥಿ ಗೃಹ