ಕಾಂಗ್ರೆಸ್ ನಾಯಕರಲ್ಲಿ ನಡುಕ ಶುರುವಾಗಿದೆ : ಅಶ್ವತ್ಥ ನಾರಾಯಣ

Webdunia
ಸೋಮವಾರ, 4 ಅಕ್ಟೋಬರ್ 2021 (13:40 IST)
ಮೈಸೂರು : ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂಬ ನಡುಕ ಕಾಂಗ್ರೆಸ್ ನಾಯಕರಲ್ಲಿ ಮೂಡಿದೆ. ಹೀಗಾಗಿಯೇ ಅವರು ಬಿಜೆಪಿಯಿಂದ ಕೆಲವು ಶಾಸಕರು ಕಾಂಗ್ರೆಸ್ಗೆ ಬರುತ್ತಾರೆ ಎಂಬ ಸುದ್ದಿ ಹರಡಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ತಿಳಿಸಿದರು.

ರಾಷ್ಟ್ರಮಟ್ಟದಲ್ಲೇ ಕಾಂಗ್ರೆಸ್ ಒಡೆದು ಹೋಗಿದೆ. ಅಲ್ಲಿ ಯಾರು ನಾಯಕರು ಎಂಬುದೇ ಗೊತ್ತಾಗುತ್ತಿಲ್ಲ. ಎಲ್ಲರೂ ಮುಖ್ಯಮಂತ್ರಿ ಆಗಬೇಕು ಎಂದು ಪ್ರಯತ್ನಪಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಎಂದೆಂದೂ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ ಎಂದರು.
ಕೋವಿಡ್ ನಿಯಂತ್ರಣಕ್ಕೆ ಬಂದು ಶಾಲೆಗಳು ಪೂರ್ಣ ಪ್ರಮಾಣದಲ್ಲಿ ಆರಂಭವಾದ ಕೂಡಲೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪೂರ್ವ ಪ್ರಾಥಮಿಕ ಹಂತದಿಂದಲೇ ಜಾರಿಗೊಳಿಸಲಾಗುವುದು ಎಂದು ಹೇಳಿದರು.
ಉಪಚುನಾವಣೆ ಉಸ್ತುವಾರಿಗಳಲ್ಲಿ ಬಿ.ವೈ.ವಿಜಯೇಂದ್ರ ಅವರನ್ನು ಕೈಬಿಟ್ಟಿರುವುದರಕ್ಕೆ ಹೆಚ್ಚಿನ ಮಹತ್ವ ಕೊಡಬೇಕಿಲ್ಲ. ಬಿ.ಎಸ್.ಯಡಿಯೂರಪ್ಪ ಅವರು ಮೋದಿ ಒಬ್ಬರ ಹೆಸರನ್ನೇಳಿ ಚುನಾವಣೆ ಗೆಲ್ಲಬೇಡಿ. ಎಲ್ಲರೂ ತಮ್ಮ ತಮ್ಮ ಪ್ರಯತ್ನ ಮಾಡಿ ಚುನಾವಣೆಯಲ್ಲಿ ಗೆಲ್ಲುವತ್ತ ಗಮನಹರಿಸಬೇಕು ಹೇಳಿದ್ದಾರೆ. ಈಗಲೂ ಎಲ್ಲೇ ಹೋದರು ಮೋದಿಯೆ ಪ್ರಧಾನಮಂತ್ರಿ ಆಗಬೇಕು ಎಂದು ಜನರು ಹೇಳುತ್ತಿದ್ದಾರೆ. ಬೇಕಾದರೆ ಹಾಸನ ಕನಕಪುರದಲ್ಲಿ ಯಾರು ಬೇಕಾದರೂ ಸಮೀಕ್ಷೆ ನಡೆಸಬಹುದು ಎಂದು ಸವಾಲೆಸೆದರು.
ಶಾಸಕ ರಾಮದಾಸ್ ನಮ್ಮ ಅಗ್ರಮಾನ್ಯ ನಾಯಕರು. ಮುಂದಿನ ದಿನಗಳಲ್ಲಿ ಅವರಿಗೆ ಉನ್ನತ ಸ್ಥಾನಮಾನಗಳು ಸಿಗಲಿವೆ ಎಂದು ತಿಳಿಸಿದರು. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ರಾಮದಾಸ್ ನಿರಂತರವಾಗಿ ಮಾಡುತ್ತಿದ್ದಾರೆ. ಇವರು ನಡೆಸುತ್ತಿರುವ ಮೋದಿ ಯುಗ್ ಉತ್ಸವ ರಾಜ್ಯಕ್ಕೆ ಮಾದರಿ ಕಾರ್ಯ ಎಂದು ಇಲ್ಲಿ ಶ್ಲಾಘಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments