Publish Date: Wed, 22 Jun 2022 (08:28 IST)
Updated Date: Wed, 22 Jun 2022 (09:31 IST)
ನವದೆಹಲಿ : ಬಿಜೆಪಿ ನೇತೃತ್ವದ ಎನ್ಡಿಎ ಮುಂಬರುವ ಚುನಾವಣೆಗೆ ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರ ಹೆಸರನ್ನು ಘೋಷಿಸಿದೆ.
ಬಿಜೆಪಿ ಹಿರಿಯ ಮುಖಂಡರಾದ ದ್ರೌಪದಿ ಮುರ್ಮು ಅವರು 2015-21ರ ಅವಧಿಯಲ್ಲಿ ಜಾರ್ಖಂಡ್ನ ರಾಜ್ಯಪಾಲರಾಗಿದ್ದರು. 16ನೇ ರಾಷ್ಟ್ರಪತಿ ಚುನಾವಣೆಯ ಎನ್ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ದ್ರೌಪದಿ ಮುರ್ಮು ಅವರು ಒಡಿಸ್ಸಾದ ಮಾಯರ್ಭಾಂಜ್ ಜಿಲ್ಲೆಯವರಾಗಿದ್ದಾರೆ. ಇವರು ಬುಡಕಟ್ಟು ಜನಾಂಗ ಮೂಲದ ಮಹಿಳೆಯಾಗಿದ್ದು, ಪಕ್ಷದ ನೇತೃತ್ವದಲ್ಲಿ ನಾನಾ ಸ್ಥಾನಗಳನ್ನು ಅಲಂಕರಿಸಿ ಸೇವೆ ಸಲ್ಲಿಸಿದ್ದಾರೆ.
ಇಂದು ಸಂಜೆಯಷ್ಟೇ ವಿಪಕ್ಷಗಳು ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಆಯ್ಕೆ ಮಾಡಿದ್ದರು. ಇದರ ಬೆನ್ನಲ್ಲೇ ಎನ್ಡಿಎ ಒಕ್ಕೂಟದಿಂದ ಅಭ್ಯರ್ಥಿ ಘೋಷಿಸಲಾಗಿದೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ.