Webdunia - Bharat's app for daily news and videos

Install App

ತ್ರಿವಳಿ ತಲಾಕ್ ಸಂವಿಧಾನ ಬಾಹಿರ: ಅಲಹಾಬಾದ್ ಹೈಕೋರ್ಟ್

Webdunia
ಗುರುವಾರ, 8 ಡಿಸೆಂಬರ್ 2016 (13:58 IST)
ದೇಶಾದ್ಯಂತ ತ್ರಿವಳಿ ತಲಾಕ್ ಪರ- ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಮಧ್ಯೆ ತ್ರಿವಳಿ ತಲಾಕ್ ಸಂವಿಧಾನ ಬಾಹಿರ, ಇದರಿಂದ ಮುಸ್ಲಿಂ ಮಹಿಳೆಯರ ಹಕ್ಕು ಉಲ್ಲಂಘನೆಯಾಗುತ್ತದೆ ಎಂದು ಅಲಹಾಬಾದ್ ಹೈಕೋರ್ಟ್ ಪೀಠ ಗುರುವಾರ  ಮಹತ್ವದ ತೀರ್ಪು ನೀಡಿದೆ.
ಮುಸ್ಲಿಂ ವೈಯಕ್ತಿಕ ಕಾನೂನಿನಡಿ ಬರುವ ವಿವಾಹ, ಆಸ್ತಿ ಮತ್ತು ವಿಚ್ಛೇದನವನ್ನು ನಿಯಂತ್ರಿಸುವ ತ್ರಿವಳಿ ತಲಾಕ್ ಮುಸ್ಲಿಂ ಮಹಿಳೆಯರ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ. ಯಾವುದೇ ವೈಯಕ್ತಿಕ ಕಾನೂನು ಸಂವಿಧಾನಕ್ಕಿಂತ ದೊಡ್ಡದಲ್ಲ.ಮೂರು ಬಾರಿ ತಲಾಕ್ ಎಂದು ಉಚ್ಛರಿಸುವುದರ ಮೂಲಕ ಪತ್ನಿಯನ್ನು ತ್ಯಜಿಸುವುದು ಕ್ರೂರತೆಯಾಗಿದೆ.  ಈ ಪದ್ಧತಿಯಿಂದ ಸಂವಿಧಾನಾತ್ಮಕ ಅಧಿಕಾರಗಳ ದಹನವಾಗುತ್ತದೆ ಎಂದು ಕೋರ್ಟ್ ಹೇಳಿದೆ. 
 
ಅನೇಕ ಮುಸ್ಲಿಂ ಮಹಿಳೆಯರು ತ್ರಿವಳಿ ತಲಾಕ್ ಪದ್ಧತಿಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ ಮತ್ತು ಇದು ಲಿಂಗ ನ್ಯಾಯ, ಸಮಾನತೆ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಕೇಂದ್ರ ಸರ್ವೋಚ್ಚ ನ್ಯಾಯಾಲಯಕ್ಕೆ ಹೇಳಿದೆ. 
 
ಆದರೆ ಪ್ರಭಾವಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಈ ಪದ್ಧತಿಯನ್ನು ಸಮರ್ಥಿಸಿಕೊಂಡಿದ್ದು ಮಹಿಳೆಯನ್ನು ಸಾಯಿಸುವುದಕ್ಕಿಂತ ಆಕೆಯನ್ನು ತ್ಯಜಿಸುವುದು ಉತ್ತಮ. ಧಾರ್ಮಿಕ ಕಾನೂನುಗಳನ್ನು ಕೋರ್ಟ್ ಪ್ರಶ್ನಿಸುವಂತಿಲ್ಲ ಎಂದಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ನಂದಿಬೆಟ್ಟದಿಂದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಶಿಫ್ಟ್: ಮಾವು ಬೆಳೆಗಾರರ ಕೋಪಕ್ಕೆ ಹೆದರಿದ ಸರ್ಕಾರ

ಕರ್ನಾಟಕದಲ್ಲಿ ಕೆಲಸದ ಅವಧಿ 10 ಗಂಟೆಗೆ ಹೆಚ್ಚಿಸಬೇಕೇ, ನಿಮ್ಮ ಅಭಿಪ್ರಾಯವೇನು

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಂಧ್ರ ಮಾಜಿ ಸಚಿವ ಅರೆಸ್ಟ್: ಕಾರಣವೇನು ಗೊತ್ತಾ

ಮುಂದಿನ ಸುದ್ದಿ