ಮಾಜಿ ಪ್ರಧಾನಿ ವಾಜಪೇಯಿ ನಿಧನ ಎಂದು ಟ್ವೀಟ್ ಮಾಡಿದ ತ್ರಿಪುರ ರಾಜ್ಯಪಾಲ

Webdunia
ಗುರುವಾರ, 16 ಆಗಸ್ಟ್ 2018 (13:57 IST)
ನವದೆಹಲಿ : ತ್ರಿಪುರ ರಾಜ್ಯಪಾಲ ತಥಾಗತ ರಾಯ್ ಅವರು ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ನಿಧನರಾಗಿದ್ದಾರೆ ಎಂದು ಟ್ವೀಟ್ ಮಾಡಿ ಜನರ ಆಕ್ರೋಶ ಕಾರಣರಾಗಿದ್ದಾರೆ.


ಗಂಭೀರ ಸ್ಥಿತಿಯಲ್ಲಿರುವ 'ಭಾರತ ರತ್ನ' ವಾಜಪೇಯಿ ಅವರನ್ನು ಜೂನ್ 11 ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಳೆದ 24 ಗಂಟೆಗಳಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಯಾವುದೇ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ. ಅವರಿಗೆ ಜೀವ ರಕ್ಷಕಗಳ ನೆರವು ಒದಗಿಸಲಾಗಿದೆ ಎಂದು ಆಸ್ಪತ್ರೆಯ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆದರೆ ತ್ರಿಪುರ ರಾಜ್ಯಪಾಲ ತಥಾಗತ ರಾಯ್ ಅವರು ಭಾರತದ ಮಾಜಿ ಪ್ರಧಾನಿ, ಅತ್ಯುತ್ತಮ ವಾಗ್ಮಿ, ಭಾರತದ ರಾಜಕೀಯದ ಧ್ರುವತಾರೆ... ಅಟಲ್ ಬಿಹಾರಿ ವಾಜಪೇಯಿ ಇಲ್ಲಿಲ್ಲ. ಓಂ ಶಾಂತಿ" ಎಂದು  ಟ್ವೀಟ್ ಮಾಡಿದ್ದಾರೆ.

ನಂತರ ಆ ಟ್ವೀಟ್ ಅನ್ನು ಅವರು ಡಿಲೀಟ್ ಮಾಡಿದ್ದಾರಾದರೂ, ಅವರು ಮಾಡಿದ್ದ ಟ್ವೀಟ್ ಅನ್ನು ಹಲವರು ಸ್ಕ್ರೀನ್ ಶಾಟ್ ತೆಗೆದುಕೊಂಡು, 'ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿ ಯಾಕೆ ಇಂಥ ಬೇಜವಾಬ್ದಾರಿ ವರ್ತನೆ ತೋರುತ್ತಾರೆ' ಎಂದು ಪ್ರಶ್ನಿಸಿದ್ದಾರೆ.


ಇದಕ್ಕೆ ಪ್ರತಿಕ್ರಿಯಿಸಿದ ತಥಾಗತ ರಾಯ್ ಅವರು ‘’ಭಾರತದ ಟಿವಿ ಚಾನೆಲ್ ವೊಂದು ಹೇಳಿದ್ದನ್ನೇ ನಾನು ಟ್ವೀಟ್ ಮಾಡಿದೆ. ಅದು ನಿಖರ ಮಾಹಿತಿ ಎಂದು ನಾನು ಭಾವಿಸಿದೆ. ಇದುವರೆಗೂ ಯಾವುದೇ ಅಧಿಕೃತ ಘೋಷಣೆ ಬಂದಿಲ್ಲ. ನಾನು ನನ್ನ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದೇನೆ. ಮತ್ತೊಮ್ಮೆ ಕ್ಷಮೆ ಇರಲಿ" ಎಂದು  ಕ್ಷಮೆ ಯಾಚಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಬೆಂಗಳೂರು: ನಾಯಿಯನ್ನು ಕೊಂದು ಕ್ರೌರ್ಯ ಮೆರೆದಿದ್ದ ಪಾಪಿ ಕೊನೆಗೂ ಅರೆಸ್ಟ್‌

ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಮೋದಿ ಯುವಜನತೆಯನ್ನು ರೀಲ್ಸ್ ದಾಸರನ್ನಾಗಿಸಿದ್ದಾರೆ: ರಾಹುಲ್

ಕೊಯಮತ್ತೂರು ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌, ಆರೋಪಿಗಳಿಗೆ ಕಾಲಿಗೆ ಗುಂಡೇಟು

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಎಚ್‌.ವೈ.ಮೇಟಿ ವಿಧಿವಶ

ಮುಂದಿನ ಸುದ್ದಿ
Show comments