ನವದೆಹಲಿ :ಚುನಾವಣೆಯಲ್ಲಿ ಆರು ಮಂದಿ ಕಾಂಗ್ರೆಸ್ ಶಾಸಕರು ಬಿಜೆಪಿ ಪರವಾಗಿ ಮತ ಚಲಾಯಿಸಿರುವ ಹಿನ್ನೆಲಯಲ್ಲಿ ಹಿಮಾಚಲ ಪ್ರದೇಶ ಕಾಂಗ್ರೆಸ್ ನಲ್ಲಿ ಬಿಕ್ಕಟ್ಟು ಉಲ್ಬಣಗೊಂಡಿದೆ. ಈ ಹಿನ್ನೆಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದೇಶದ ಮೇರೆಗೆ ಡಿ.ಕೆ. ಶಿವಕುಮಾರ್ ಭಿನ್ನಮತ ಶಮನಗೊಳಿಸಲು ಹಿಮಾಚಲ ಪ್ರದೇಶಕ್ಕೆ ತೆರಳಿದ್ದಾರೆ.ಬುಧವಾರ ಶಿಮ್ಲಾ ತಲುಪಲಿರುವ ಡಿ.ಕೆ ಶಿವಕುಮಾರ್ ಅವರಿಗೆ ಹರಿಯಾಣಾ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರು ಸಾಥ್ ನೀಡಲಿದ್ದಾರೆ. ಇಬ್ಬರೂ ನಾಯಕರು ಕಾಂಗ್ರೆಸ್ ಮುಖಂಡರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.
68 ಸದಸ್ಯ ಬಲದ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್-40 , ಬಿಜೆಪಿ -25 ಶಾಸಕರನ್ನು ಹೊಂದಿದೆ. ಆದರೂ ಸಹ ಏಕೈಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿರುವುದು ಕಾಂಗ್ರೆಸ್ ಮುಖಭಂಗಕ್ಕೊಳಗಾಗಿದೆ.