ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಟಿಆರ್‌ಎಸ್ ರಾಜ್ಯಸಭಾ ಸದಸ್ಯನ ಪುತ್ರ ಅರೆಸ್ಟ್

Webdunia
ಸೋಮವಾರ, 13 ಆಗಸ್ಟ್ 2018 (14:27 IST)
ಹೈದರಾಬಾದ್ : ತೆಲಂಗಾಣ ರಾಷ್ಟ್ರೀಯ ಸಮಿತಿ (ಟಿಆರ್‌ಎಸ್)ಯ ರಾಜ್ಯಸಭಾ ಸದಸ್ಯ ಡಿ. ಶ್ರೀನಿವಾಸ್ ಅವರ ಪುತ್ರ ಡಿ. ಸಂಜಯ್ ಎಂಬಾತ  ತಾನು ನಡೆಸುವ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಎಂಬ ಆರೋಪದ ಮೇಲೆ ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ.


ನಿಝಾಮಾಬಾದ್‌ನ ಮಾಜಿ ಮೇಯರ್ ಆಗಿದ್ದ ಸಂಜಯ್ ಆಗಸ್ಟ್ 3ರಂದು ತನ್ನ ಮೇಲೆ  ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿವಾರ ಪೊಲೀಸರ ಮುಂದೆ ಶರಣಾಗಿದ್ದಾನೆ. ವಿಚಾರಣೆಗೆ ಗುರಿಪಡಿಸಿದ ಬಳಿಕ ಆತನನ್ನು ಅಧಿಕೃತವಾಗಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಸ್ಥಳೀಯ ನ್ಯಾಯಾಲಯ ಆರೋಪಿಗೆ ಎರಡು ವಾರಗಳ ನ್ಯಾಯಾಂಗ ಬಂಧನ ವಿಧಿಸಿದೆ.


ಇತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ, ಅಶ್ಲೀಲ ಭಾಷೆಯಲ್ಲಿ ನಿಂದಿಸುತ್ತಿದ್ದ ಎಂದು ವಿದ್ಯಾರ್ಥಿನಿಯರು ದೂರಿದ್ದಾರೆ. ಹಾಗೇ ತಮ್ಮ ಆರೋಪಕ್ಕೆ ಪುರಾವೆಯಾಗಿ ಸಂಜಯ್ ಕಳುಹಿಸಿದ ಎಸ್‌ಎಂಎಸ್ ಸಂದೇಶಗಳನ್ನೂ ಅವರು ನೀಡಿದ್ದಾರೆ.


ಆದರೆ ಈ ಆರೋಪವನ್ನು ನಿರಾಕರಿಸಿದ್ ಸಂಜಯ್, ಇದು ರಾಜಕೀಯಪ್ರೇರಿತ ಹಾಗೂ ನಮ್ಮ ಕುಟುಂಬವನ್ನು ಗುರಿ ಮಾಡಿ ಮಾಡುತ್ತಿರುವ ಸುಳ್ಳು ಆರೋಪ ಎಂದಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ