Select Your Language

Notifications

webdunia
webdunia
webdunia
webdunia

ನರೇಂದ್ರಮೋದಿಗೆ ಕರೆ ಮಾಡಿ ಅಭಿನಂದಿಸಿದ ಡೊನಾಲ್ಡ್ ಟ್ರಂಪ್

ನರೇಂದ್ರಮೋದಿಗೆ ಕರೆ ಮಾಡಿ ಅಭಿನಂದಿಸಿದ ಡೊನಾಲ್ಡ್ ಟ್ರಂಪ್
ನ್ಯೂಯಾರ್ಕ್ , ಮಂಗಳವಾರ, 28 ಮಾರ್ಚ್ 2017 (08:14 IST)
ಉತ್ತರಪ್ರದೇಶ ಸೇರಿದಂತೆ ಚುನಾವಣೆಯಲ್ಲಿ ಅದ್ಬುತ ಜಯ ದಾಖಲಿಸಿದ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಕರೆ ಮಾಡಿ ಅಭಿನಂದನೆ ತಿಳಿಸಿದ್ದಾರೆ. ಸೋಮವಾರ ರಾತ್ರಿ ಕರೆ ಮಾಡಿದ್ದಟ್ರಂಪ್ ಚುನಾವಣೆ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದು, ಉಭಯ ನಾಯಕರು ಪರಸ್ಪರ ತಮ್ಮ ದೇಶಗಳ ಪ್ರವಾಸಕ್ಕೆ ಆಹ್ವಾನ ನೀಡಿದ್ದಾರೆ.
 

ಡೊನಾಲ್ಡ್ ಟ್ರಂಪ್ ಅವರ ಮಾಧ್ಯಮ ಕಾರ್ಯದರ್ಶಿ ಸೀನ್ ಸ್ಪೈಸರ್ ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ನಡೆದ ಪಂಚ ರಾಜ್ಯ ಚುನಾವಣೆಗಳಲ್ಲಿ ಬಿಜೆಪಿ 4 ರಾಜ್ಯಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿತ್ತು. ಈ 4 ರಾಜ್ಯಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಹವಾ ಕೆಲಸ ಮಾಡಿತ್ತು.

ಎಲ್ಲಕ್ಕಿಂತ ಪ್ರಮುಖವಾಗಿ ಬೃಹತ್ ರಾಜ್ಯ ಉತ್ತರಪ್ರದೇಶದಲ್ಲಿ ಸ್ಥಳೀಯ ಪ್ರಬಲ ಪಕ್ಷಗಳಾದ ಎಸ್ಪಿ ಮತ್ತು ಬಿಎಸ್ಪಿಯನ್ನ ಹಿಂದಿಕ್ಕಿ ಅದ್ಬುತ ಜಯ ದಾಖಲಿಸಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ರೈತರ ಸಾಲ ಮನ್ನಾ ಮಾಡಲು ಸರಕಾರಕ್ಕೆ ಇಚ್ಚಾಶಕ್ತಿಯ ಕೊರತೆ: ಕುಮಾರಸ್ವಾಮಿ