Webdunia - Bharat's app for daily news and videos

Install App

ಜಲ್ಲಿಕಟ್ಟಿಗೆ 2 ಬಲಿ, 83 ಜನರಿಗೆ ಗಾಯ

Webdunia
ಭಾನುವಾರ, 22 ಜನವರಿ 2017 (16:22 IST)
ತಮಿಳುನಾಡಿನಲ್ಲಿ ಜಲ್ಲಿಕಟ್ಟಿಗೆ ಇಬ್ಬರು ಬಲಿಯಾಗಿದ್ದು, 83 ಜನರಿಗೆ ಗಂಭೀರ ಗಾಯವಾಗಿದೆ.

ಪುದುಕೊಟೈ ಜಿಲ್ಲೆಯ ರಾಕೂಸಲ್ ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು ಸ್ವತಃ ಕ್ರೀಡಾ ಸಚಿವ ವಿಜಯ್ ಭಾಸ್ಕರ್ ಅವರೇ ಇಲ್ಲಿ ಜಲ್ಲಿಕಟ್ಟಿಗೆ ಚಾಲನೆ ನೀಡಿದ್ದರು. 
 
ಮೋಹನ್ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದರೆ, ರಾಜು ಎಂಬಾತ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. 
 
ಗೂಳಿ ಕೊಂಬು ಚುಚ್ಚಿದ್ದರಿಂದ ಇಬ್ಬರ ಸಾವು ಸಂಭವಿಸಿದೆ ಎಂದು ತಿಳಿದು ಬಂದಿದೆ. ರಾಜ್ಯದ ವಿವಿಧೆಡೆ ನಡೆದ ಕ್ರೀಡೆಯಲ್ಲಿ ಒಟ್ಟು 83 ಜನರು ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಜಲ್ಲಿಕಟ್ಟು ಪರ ನಿಂತಿರುವ ತಮಿಳುನಾಡು ಸರ್ಕಾರ ಆಯೋಜಿಸಿದ್ದ ಕಡೆಯಲ್ಲೇ ಈ ದುರ್ಘಟನೆ ನಡೆದಿದ್ದು, ಮತ್ತೀಗ ಸರ್ಕಾರ ಹೇಗಿದನ್ನು ಸಮರ್ಥಿಸಿಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕು.

ಸುಗ್ರೀವಾಜ್ಞೆ ಹೊರಡಿಸಿದ ತಮಿಳುನಾಡಿನ ಹಲವು ಕಡೆ ಭಾನುವಾರ ಜಲ್ಲಿಕಟ್ಟು ಸ್ಪರ್ಧೆ ಆರಂಭವಾಗಿದೆ.
 
ಜತೆಗೆ ಜಲ್ಲಿಕಟ್ಟು ಸ್ಪರ್ಧೆಗೆ ಶಾಶ್ವತ ಪರಿಹಾರ ಸಿಗಬೇಕು ಮತ್ತು ಪ್ರಾಣಿ ದಯಾ ಸಂಘ ಪೆಟಾ ನಿಷೇಧಿಸಬೇಕು ಎಂದು ಒತ್ತಾಯಿಸಿ ಚೆನ್ನೈನ ಮರೀನಾ ಬೀಚ್‌ ಹಾಗೂ ಮಧುರೈನಲ್ಲಿ ಪ್ರತಿಭಟನೆ ಮುಂದುವರೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments