ಕರೂರು ದುರಂತದ ಬಳಿಕ ವಿಜಯ್ ಸಾರ್ವಜನಿಕ ರ್ಯಾಲಿಗೆ ಟಿವಿಕೆ ಮನವಿ

Sampriya
ಗುರುವಾರ, 20 ನವೆಂಬರ್ 2025 (17:53 IST)
Photo Credit X
ಚೆನ್ನೈ: 41 ಜನರ ಸಾವಿಗೆ ಕಾರಣವಾದ ಕರೂರ್ ಕಾಲ್ತುಳಿತ ದುರಂತದ ನಂತರ ಸ್ಥಗಿತಗೊಂಡಿದ್ದ ಪಕ್ಷದ ಮುಖ್ಯಸ್ಥ ಮತ್ತು ನಟ ವಿಜಯ್ ಅವರ ರಾಜ್ಯಾದ್ಯಂತ ಪ್ರವಾಸವನ್ನು ಪುನರಾರಂಭಿಸುವ ಪ್ರಯತ್ನದಲ್ಲಿ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ಡಿಸೆಂಬರ್ 4 ರಂದು ಸಾರ್ವಜನಿಕ ರ್ಯಾಲಿ ನಡೆಸಲು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪೊಲೀಸರ ಅನುಮತಿ ಕೇಳಿದೆ. 

ಮಂಗಳವಾರ, ಪಕ್ಷದ ಸೇಲಂ ಜಿಲ್ಲಾ ಕಾರ್ಯದರ್ಶಿ ಸೇಲಂ ಪೊಲೀಸ್ ಕಮಿಷನರ್‌ಗೆ ಮನವಿ ಸಲ್ಲಿಸಿ, ಮೂರು ಸಂಭಾವ್ಯ ಸ್ಥಳಗಳನ್ನು ಪ್ರಸ್ತಾಪಿಸಿದರು. ಬೋಸ್ ಮೈದಾನ, ಫೋರ್ಟ್ ಮೈದಾನ ಮತ್ತು ಸೀಲನಾಯಕನ್‌ಪಟ್ಟಿ ಪ್ರದೇಶದಲ್ಲಿ ಖಾಸಗಿ ಜಾಗ. 

ಕರೂರ್ ಜಿಲ್ಲೆಯ ವೇಲುಸಾಮಿಪುರಂನಲ್ಲಿ ಟಿವಿಕೆಯ ರಾಜಕೀಯ ರ್ಯಾಲಿಗಾಗಿ ಭಾರೀ ಜನಸ್ತೋಮ ನೆರೆದ ನಂತರ ನಡೆದ ಕರೂರ್ ದುರಂತವು ರಾಜ್ಯದ ರಾಜಕೀಯ ರ್ಯಾಲಿಗಳ ತೀವ್ರ ಪರಿಶೀಲನೆಗೆ ಕಾರಣವಾಗಿತ್ತು.

ಇಂತಹ ದುರಂತಗಳನ್ನು ತಡೆಯಲು ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚಿಸಿ ರೂಪಿಸಿರುವ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್(ಎಸ್‌ಒಪಿ)ಯನ್ನು ತಮಿಳುನಾಡು ಸರ್ಕಾರ ಶುಕ್ರವಾರ ಮದ್ರಾಸ್ ಹೈಕೋರ್ಟ್‌ಗೆ ಸಲ್ಲಿಸುವ ನಿರೀಕ್ಷೆಯಿದೆ. 

ಟಿವಿಕೆಯು ಪಕ್ಷಗಳಾದ್ಯಂತ ರ್ಯಾಲಿಗಳಿಗೆ ಏಕರೂಪದ ನಿಯಮಗಳನ್ನು ಕೋರಿ ಈ ಹಿಂದೆ ನ್ಯಾಯಾಲಯದ ಮೊರೆ ಹೋಗಿತ್ತು, ಪೊಲೀಸರು ಟಿವಿಕೆಗೆ ಪ್ರತ್ಯೇಕವಾಗಿ ಅಪ್ರಾಯೋಗಿಕ ಮತ್ತು ಕಠಿಣ ಷರತ್ತುಗಳನ್ನು ವಿಧಿಸುತ್ತಿದ್ದಾರೆ ಎಂದು ಆರೋಪಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments