Publish Date: Tue, 15 Sep 2020 (12:58 IST)
Updated Date: Tue, 15 Sep 2020 (12:59 IST)
ಚೆನ್ನೈ: ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದನ್ನು ಪ್ರಶ್ನಿಸಿದ್ದವರ ಮೇಲೆಯೇ ವ್ಯಕ್ತಿಗಳಿಬ್ಬರು ಹಲ್ಲೆ ನಡೆಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ರಶೀದ್ ಮತ್ತು ಆತನ ಸಹೋದರ ಹಮೀದ್ ಎಂಬಾತ ಪಾನಮತ್ತರಾಗಿ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದರು. ಇದನ್ನು ಹಿರಿಯ ವ್ಯಕ್ತಿಯೊಬ್ಬರು ಪ್ರಶ್ನೆ ಮಾಡಿದ್ದರು. ಇದರಿಂದ ಆಕ್ರೋಶಗೊಂಡ ಆರೋಪಿಗಳು ವೃದ್ಧನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ವೃದ್ಧನ ಕುಟುಂಬಸ್ಥರೂ ನೆರವಿಗೆ ಬಂದಿದ್ದು, ಅವರ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ. ಇದೀಗ ಪ್ರಕರಣದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.