Select Your Language

Notifications

webdunia
webdunia
webdunia
webdunia

ಮಹಿಳಾ ಕೈದಿಯ ಮೇಲೆ ಇಬ್ಬರು ಕಾಮುಕರಿಂದ ಸಾಮೂಹಿಕ ಅತ್ಯಾಚಾರ

ಮಹಿಳಾ ಕೈದಿಯ ಮೇಲೆ ಇಬ್ಬರು ಕಾಮುಕರಿಂದ ಸಾಮೂಹಿಕ ಅತ್ಯಾಚಾರ
ಪಾಟ್ನಾ , ಶನಿವಾರ, 1 ಡಿಸೆಂಬರ್ 2018 (07:05 IST)
ಪಾಟ್ನಾ : ಮಹಿಳಾ ಕೈದಿಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದ ಮುಜಫರ್ ಪುರ್ ಪಟ್ಟಣದಲ್ಲಿ ನಡೆದಿದೆ.


ನವೆಂಬರ್ 14ರಂದು ರಾತ್ರಿ ವೇಳೆ ಸಂತ್ರಸ್ತೆ ಮುಜಾಫುರ್ ಪುರದ ಶ್ರೀಕೃಷ್ಣ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದರು. ಆ ವೇಳೆ ಮಹಿಳೆ ಆಸ್ಪತ್ರೆಯಲ್ಲಿದ್ದ ಶೌಚಾಲಯಕ್ಕೆ ಹೋಗಿದ್ದಾಗ ಸಲೇಶ್ ಕುಮಾರ್ ಮತ್ತು ಚೋಟಾಲ್ ಕುಮಾರ್ ಎಂಬ ಇಬ್ಬರು ಕಾಮುಕರು ಅತ್ಯಾಚಾರ ಎಸಗಿದ್ದಾರೆ.


ಈ ವಿಚಾರವನ್ನು ಮಹಿಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಬಂದ ಮೇಲೆ ಜೈಲಿನ ಸೂಪರಿಟೆಂಡೆಂಟ್ ಗೆ ಮಾಹಿತಿ ತಿಳಿಸಿ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾಳೆ.


ಈ ಪ್ರಕರಣ ಕುರಿತು ನಿಷ್ಪಕ್ಷಪಾತವಾಗಿ ತನಿಖೆ ಮಾಡಲಾಗುವುದು. ಜೊತೆಗೆ ಶೀಘ್ರದಲ್ಲೇ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ನಾನು ಭರವಸೆ ನೀಡುತ್ತೇನೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ರಂಜೀತ್ ಕುಮಾರ್ ಸಿಂಗ್ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ತೆಲಂಗಾಣಾ ಚುನಾವಣೆ: ರಾಜ್ಯದ ಗಡಿ ಪ್ರದೇಶದಲ್ಲಿ ಮದ್ಯ ಮಾರಾಟ ನಿಷೇಧ