ಏಷ್ಯಾ ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣ ದಿಢೀರ್ ಏರಿಕೆಯಾಗಿದ್ದು, ಇದೀಗ ಭಾರತದಲ್ಲೂ ಕೋವಿಡ್ ಪ್ರಕರಣ ಏರಿಕೆಯಾಗಿದೆ. ಪ್ರಮುಖವಾಗಿ ಕೇರಳದಲ್ಲಿ ಶೇಕಡಾ 90 ರಷ್ಟು ಪ್ರಕರಣ ದಾಖಲಾಗಿದೆ.
ನವೆಂಬರ್ ತಿಂಗಳಲ್ಲಿ ಕೇರಳದಲ್ಲಿ 450 ಕೋವಿಡ್ ಪ್ರಕರಣ ದಾಖಲಾಗಿತ್ತು. ಆದರೆ ಡಿಸೆಂಬರ್ ತಿಂಗಳ 15ರವರೆಗೆ 825 ಕೋವಿಡ್ ಪ್ರಕರಣ ದಾಖಲಾಗಿದ್ದಲ್ಲದೆ ಈ ತಿಂಗಳಲ್ಲಿ ಕೋವಿಡ್‌ಗೆ ಇಬ್ಬರು ಬಲಿಯಾಗಿದ್ದಾರೆ ಅಂತಾ ಹೇಳಲಾಗಿದೆ.