ಡಾ. ಜಿ.ಪರಮೇಶ್ವರ್ ಅವರು ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಆ ಸ್ಥಾನವನ್ನ ಯಾರಿಗೆ ಕೊಡುತ್ತಾರೆ ಎಂಬ ಕುತೂಹಲ ಎಲ್ಲೆಡೆ ಮನೆ ಮಾಡಿದೆ. ಈ ಮಧ್ಯೆ, ಗೃಹಸಚಿವ ಸ್ಥಾನದ ರೇಸ್`ನಲ್ಲಿ ಸಚಿವರಾದ ಸಂತೋಷ್ ಲಾಡ್ ಮತ್ತು ರಾಮಲಿಂಗಾರೆಡ್ಡಿ ಹೆಸರು ಕೇಳಿಬರುತ್ತಿವೆ.
ಚುನಾವಣಾ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಲಾ ಅಂಡ್ ಆರ್ಡರ್ ಕಾಪಾಡಬೇಕಿುವುದರಿಂದ ಹಿರಿಯರಾದ ರಾಮಲಿಂಗಾರೆಡ್ಡಿಯವರಿಗೆ ಗೃಹ ಸಚಿವ ಸ್ಥಾನ ಸಿಗಲಿದೆ ಎಂದು ಹೇಳಲಾಗುತ್ತಿದೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಹೆಸರು ಸಹ ಕೇಳಿಬರುತ್ತಿದೆ. ಹಿಂದೊಮ್ಮೆ ಆರೋಪಗಖು ಎದುರಾದಾಗ ಲಾಡ್ ಅವರನ್ನ ಸಂಪುಟದಿಂದ ಕೈಬಿಟ್ಟು, ಆರೋಪಮುಕ್ತರಾದ ಬಳಿಕ ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತು. ಯುವಕರಿಗೆ ಅವಕಾಶ ನೀಡುವಲ್ಲಿ ಸಿಎಂ ನಿರ್ಧಾರ ಕೈಗೊಂಡರೆ ಸಂತೋಷ್ ಲಾಡ್ ಅವರಿಗೆ ಗೃಹಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ.
ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿದ ಬಳಿಕ ಹೈಕಮಾಂಡ್ ಸೂಚನೆಯಂತೆಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸದ್ಯ, ಸಿಎಂ ಸಿದ್ದರಾಮಯ್ಯ ಬಳಿಯೇ ಗೃಹ ಖಾತೆ ಇದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ