ತಮಿಳುನಾಡು ಡಿಸಿಎಂ ಆಗಿ ಉದಯನಿಧಿ ಸ್ಟಾಲಿನ್ ಪ್ರಮಾಣ ವಚನ ಸ್ವೀಕಾರ

Sampriya
ಭಾನುವಾರ, 29 ಸೆಪ್ಟಂಬರ್ 2024 (17:00 IST)
Photo Courtesy X
ಚೆನ್ನೈ: ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್‌ ಅವರು ಉಪ ಮುಖ್ಯಮಂತ್ರಿಯಾಗಿ ಇಂದು (ಭಾನುವಾರ) ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಆರ್‌ಎನ್‌ ರವಿ ಅವರು ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಉದಯನಿಧಿ ಸ್ಟಾಲಿನ್‌ ಸೇರಿದಂತೆ ನಿಯೋಜಿತ ಮಂತ್ರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ.

ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ತಂಡದಲ್ಲಿ ಸಂಪುಟ ಪುನಾರಚನೆಯ ಭಾಗವಾಗಿ ಇಂದು ಮಧ್ಯಾಹ್ನ ಡಿಎಂಕೆ ಸರ್ಕಾರದಲ್ಲಿ ಮೂವರು ತಮಿಳುನಾಡಿನ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸುಪ್ರಿಂ ಕೋರ್ಟ್ ಜಾಮೀನು ನೀಡುವ ಮುನ್ನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 15 ತಿಂಗಳು ಜೈಲು ವಾಸ ಅನುಭವಿಸಿದ್ದ ಡಿಎಂಕೆ ನಾಯಕ ಸೆಂಥಿಲ್ ಬಾಲಾಜಿ ಅವರು ಇಂದು ಸಚಿವರಾಗಿ ಪುನಃ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಇತರ ಮೂವರು ಶಾಸಕರೆಂದರೆ ಗೋವಿ ಚೆಜಿಯಾನ್, ಎಸ್ ಎಂ ನಾಸರ್ ಮತ್ತು ಆರ್ ರಾಜೇಂದ್ರನ್.  ಬಾಲಾಜಿ ವಿದ್ಯುತ್, ಅಬಕಾರಿ ಮತ್ತು ನಿಷೇಧ ಸಚಿವರಾಗಿ ಮರಳಿದ್ದಾರೆ. ಚೆಝಿಯಾನ್ ಅವರು ಉನ್ನತ ಶಿಕ್ಷಣ ಖಾತೆಯನ್ನು ವಹಿಸಿಕೊಳ್ಳಲಿದ್ದಾರೆ, ನಾಸರ್ ಹೊಸ ಅಲ್ಪಸಂಖ್ಯಾತರ ಸಚಿವರಾಗಲಿದ್ದಾರೆ ಮತ್ತು ರಾಜೇಂದ್ರನ್ ಅವರಿಗೆ ಪ್ರವಾಸೋದ್ಯಮ ಖಾತೆಯನ್ನು ನೀಡಲಾಗಿದೆ.

ಇಂದು ಮುಂಜಾನೆ, ಉದಯನಿಧಿ ಸ್ಟಾಲಿನ್ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ 'ಉಪಮುಖ್ಯಮಂತ್ರಿ' ನನಗೆ ಸ್ಥಾನವಲ್ಲ ಆದರೆ ಜವಾಬ್ದಾರಿ ಎಂದು ಹೇಳಿದ್ದಾರೆ. ಅವರು ತಮ್ಮ ತಾತ ಎಂ ಕರುಣಾನಿಧಿ ಮತ್ತು ಸಾಮಾಜಿಕ ಕಾರ್ಯಕರ್ತ ಪೆರಿಯಾರ್ ಅವರ ಸ್ಮಾರಕಗಳಿಗೆ ಭೇಟಿ ನೀಡಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಭವನಗಳಿಗೆ 67 ಕೋಟಿ, ಹಿಂದೂಗಳಿಗೆ ದುಡ್ಡಿಲ್ಲ: ಹಿಂದೂಗಳು ವೋಟ್ ಹಾಕಿಲ್ವಾ ಎಂದ ಅಶೋಕ್

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ನಡೆದಿತ್ತು ಮತಪಟ್ಟಿ ಪರಿಷ್ಕರಣೆ: ಹಾಗಿದ್ದರೂ ಈಗ ವಿರೋಧ ಯಾಕೆ

ನಿತೀಶ್ ಕುಮಾರ್ ಪದೇ ಪದೇ ಮೋದಿ ಕಾಲಿಗೆ ಬೀಳೋದ್ಯಾಕೆ: ವಿಡಿಯೋ ನೋಡಿ ಕೆಲವರಿಗೆ ಉರಿ

ಬೆಂಗಳೂರು ದರೋಡೆ ಪ್ರಕರಣ: ಪೊಲೀಸರ ಕಣ್ತಪ್ಪಿಸಲು ಕಳ್ಳರ ಖತರ್ನಾಕ್ ಪ್ಲ್ಯಾನ್ ಬಹಿರಂಗ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಮುಂದಿನ ಸುದ್ದಿ
Show comments