ಪಂಜಾಬ್ : 2 ವರ್ಷದ ಬಾಲಕಿಯ ಮೇಲೆ ಆಕೆಯ ಚಿಕ್ಕಪ್ಪ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಪಂಜಾಬ್ ನ ಜಲಂಧರ್ ನಲ್ಲಿ ನಡೆದಿದೆ.
ಬಾಲಕಿ ತನ್ನ ಪೋಷಕರ ಜೊತೆ ಚಿಕ್ಕಪ್ಪನ ಮನೆಗೆ ಬಂದಿದ್ದಾಗ ಬಾಲಕಿಗೆ ಆಮಿಷಯೊಡ್ಡಿ ಮನೆಯಿಂದ ಹೊರಗೆ ಕರೆದುಕೊಂಡು ಹೋದ ಚಿಕ್ಕಪ್ಪ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಬಾಲಕಿಯ ಪೋಷಕರು ಆರೋಪಿ ವಿರುದ್ಧ ದೂರು ದಾಖಲಿಸಿದ ಹಿನ್ನಲೆಯಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಹುಡುಕಾಡುತ್ತಿದ್ದಾರೆ. ಬಾಲಕಿ ಸ್ಥಿತಿ ಗಂಭೀರವಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.