Publish Date: Wed, 30 Mar 2022 (14:24 IST)
Updated Date: Wed, 30 Mar 2022 (16:27 IST)
ನವದೆಹಲಿ : ಎರಡು ಅಗ್ನಿಶಾಮಕ ಸಿಬ್ಬಂದಿ ದೆಹಲಿಯ ಗಾಜಿಪುರ ಲ್ಯಾಂಡ್ಫಿಲ್ನಲ್ಲಿ ಸುಮಾರು 48 ಗಂಟೆಗಳ ಕಾಲ ಬೆಂಕಿಯನ್ನು ನಂದಿಸುವಲ್ಲಿ ತೊಡಗಿದ್ದರೂ,
ನಿಯಂತ್ರಣಕ್ಕೆ ಬಂದಿಲ್ಲ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ಕೊಟ್ಟ ಅಗ್ನಿಶಾಮಕ ದಳದ ಅಧಿಕಾರಿಗಳು, ಈ ಬೆಂಕಿ ಅನಾಹುತದಲ್ಲಿ ಯಾವುದೇ ರೀತಿ ಅಪಾಯ ಸಂಭವಿಸಿಲ್ಲ.
ಬೆಂಕಿಯನ್ನು ನಂದಿಸಲು ನಾವು ಎಲ್ಲ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದ್ದೇವೆ. ಕೂಲಿಂಗ್ ಕಾರ್ಯಾಚರಣೆಗಳನ್ನು ಪೂರ್ಣಗೊಳಿಸಲು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಈ ಕೃತ್ಯಕ್ಕೆ ಕಾರಣರಾದ ಆರೋಪಿಗಳ ವಿರುದ್ಧ ಕೇಸ್ ದಾಖಲಿಸಿಕೊಳ್ಳಲಾಗಿದೆ. ಅವರಿಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ವಿವರಿಸಿದ್ದಾರೆ.
ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 278(ವಾತಾವರಣದಲ್ಲಿ ಆರೋಗ್ಯಕ್ಕೆ ಹಾನಿಕಾರಕ ಮಾಡುವುದು), 285(ಬೆಂಕಿ ಅಥವಾ ದಹನಕಾರಿ ವಸ್ತುಗಳಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ನಡವಳಿಕೆ) ಮತ್ತು 336(ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕೃತ್ಯ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಉಪ ಆಯುಕ್ತರು ಪೊಲೀಸ್ ಪ್ರಿಯಾಂಕಾ ಕಶ್ಯಪ್ ಮಂಗಳವಾರ ತಿಳಿಸಿದ್ದಾರೆ.