ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ 2025 ರಲ್ಲಿ ಮಹಿಳೆಯರಿಗೆ ಭರ್ಜರಿ ಕೊಡುಗೆ ಸಿಕ್ಕಿದೆ. ಹೊಸ ಯೋಜನೆಯೊಂದನ್ನು ಪ್ರಕಟಿಸಿದ್ದಾರೆ.
ಮೋದಿ ಸರ್ಕಾರ ಮೂರನೇ ಬಾರಿಗೆ ಅಧಿಕಾರಿ ಸ್ವೀಕರಿಸಿದ ಬಳಿಕ ಮಂಡನೆಯಾಗುತ್ತಿರುವ ಮೊದಲ ಪೂರ್ಣಪ್ರಮಾಣದ ಬಜೆಟ್ ಇದಾಗಿದೆ. ಸತತ 8 ನೇ ಬಾರಿಗೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಈ ಬಾರಿ ಬಜೆಟ್ ನಲ್ಲಿ ಬಡತನ ನಿರ್ಮೂಲನೆ ಮಾಡುವ ಗುರಿ ಹಮ್ಮಿಕೊಳ್ಳಲಾಗಿದೆ. ವಿಶೇಷವಾಗಿ ಹಿಂದುಳಿದ ವರ್ಗದ ಮಹಿಳೆಯರಿಗೆ ನಿರ್ಮಲಾ ಸೀತಾರಾಮನ್ ಹೊಸ ಯೋಜನೆ ಪ್ರಕಟಿಸಿದ್ದಾರೆ.
ಅದರಂತೆ ಎಸ್ ಸಿ-ಎಸ್ ಟಿ ಮಹಿಳೆಯರಿಗೆ 5 ಲಕ್ಷ ರೂ.ಗಳ, 5 ವರ್ಷಗಳ ಸಾಲ ನೀಡುವ ಹೊಸ ಯೋಜನೆಯನ್ನು ಘೋಷಿಸಲಾಗಿದೆ. ಇದು ಸ್ವಂತ ಉದ್ಯಮ ಮಾಡಬೇಕೆಂದಿರುವ ಮಹಿಳೆಯರಿಗೆ ಸಹಾಯವಾಗಲಿದೆ.