Publish Date: Wed, 20 Dec 2017 (13:09 IST)
Updated Date: Wed, 20 Dec 2017 (13:13 IST)
ದೆಹಲಿಯಲ್ಲಿ ಬಿಜೆಪಿ ಸಂಸದೀಯ ಪಕ್ಷದ ಸಭೆ ನಡೆಯುತ್ತಿದ್ದ ಸಂದರ್ಭದಲ್ಲಿ ಕೇಂದ್ರ ಕೃಷಿ ಮತ್ತು ಕೃಷಿಕರ ಕಲ್ಯಾಣ ಸಚಿವೆ ಕೃಷ್ಣಾರಾಜ್ ಅವರು ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಸಚಿವರುಗಳು ಮತ್ತು ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು. ಸಭೆ ಆರಂಭವಾದ ಕೆಲ ಸಮಯದ ನಂತರ ಸಚಿವೆ ಅಸ್ವಸ್ಥರಾದರು ಎಂದು ತಿಳಿದುಬಂದಿದೆ.
ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಯಿತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.