ಕಾರು ಅಪಘಾತದಲ್ಲಿ ಕೇಂದ್ರ ಸಚಿವರಿಗೆ ಗಾಯ

Webdunia
ಶನಿವಾರ, 24 ಡಿಸೆಂಬರ್ 2016 (10:29 IST)
ಕೇಂದ್ರ ರೈಲ್ವೆ ಹಾಗೂ ಸಂವಹನ ಇಲಾಖೆ ಸಹಾಯಕ ಸಚಿವ ಮನೋಜ್ ಸಿನ್ಹಾ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಸಣ್ಣಪುಟ್ಟ ಗಾಯಗಳೊಂದಿಗೆ ಸಿನ್ಹಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉತ್ತರ ಪ್ರದೇಶದ ಗೋರಖ್ಪುರ ಬಳಿ ಶುಕ್ರವಾರ ಈ ಘಟನೆ ನಡೆದಿದೆ.
ಶುಕ್ರವಾರ ಸಂಜೆ 7.15ರ ಸುಮಾರಿಗೆ ಅಪಘಾತ ಸಂಭವಿಸಿದ್ದು ಸಚಿವರು ಬಾರಾಬಂಕಿಯಿಂದ ಗೋರಖ್ಪುರಕ್ಕೆ ತೆರಳುತ್ತಿದ್ದರು.
 
ತಪತಿ ನದಿ ಸೇತುವೆ ಬಳಿ  ಸಚಿವರ ಕಾರು ಸಾಗುತ್ತಿದ್ದಾಗ ಮುಂದಿದ್ದ ವಾಹನ ಚಾಲಕ ಏಕಾಏಕಿ ಬ್ರೇಕ್ ಒತ್ತಿದ್ದಾನೆ. ಹೀಗಾಗಿ ಸಚಿವರ ಕಾರ್ ಮುಂದಿದ್ದ ವಾಹನಕ್ಕೆ ಗುದ್ದಿದೆ. 
 
ಸಚಿವರ ಎಡಗಾಲಿಗೆ ಪೆಟ್ಟು ಬಿದ್ದಿದೆ. ತಕ್ಷಣ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ರೈಲ್ವೆ ಆಸ್ಪತ್ರೆಗೆ ರವಾನಸಲಾಗಿದೆ ಎಂದು ಈಶಾನ್ಯ ರೈಲು ಅಧಿಕಾರಿ ಸಂಜಯ್ ಯಾದವ್ ತಿಳಿಸಿದ್ದಾರೆ. ಇಂದು ಅವರು ನವದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ ಎಂದು ತಿಳಿದು ಬಂದಿದೆ.
 
ಸಿನ್ಹಾ ಘಾಜಿಪುರದ ಸಂಸದರಾಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments