ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಕಪಾಳಕ್ಕೆ ಹೊಡೆಯುತ್ತೇನೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಮುಂಬೈ ಪೊಲೀಸರು ಬಂ
ಧಿಸಿದ್ದಾರೆ.
ಬಂಧನ ಭೀತಿ ಹಿನ್ನೆಲೆಯಲ್ಲಿ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಪೊಲೀಸರು ನಾರಾಯಣ ರಾಣೆ ಅವರನ್ನು ಬಂಧಿಸಿದರು.
ಮಂಗಳವಾರ ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಸಚಿವ ನಾರಾಯಣ ರಾಣೆ ಉದ್ದವ್ ಠಾಕ್ರೆ ಕಪಾಳಕ್ಕೆ ಹೊಡೆಯುವುದಾಗಿ ಹೇಳಿದ್ದರು. ಇದರ ಬೆನ್ನಲ್ಲೇ ಅವರ ವಿರುದ್ಧ ಹಲವಾರು ಕಡೆ ಎಫ್ ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಬಾಂಬೆ ಹೈಕೋರ್ಟ್ ಮುಂದೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.