ಮೈಸೂರು: ಉಗ್ರರನ್ನು ಹಿಮ್ಮೆಟ್ಟಿಸುವ ವಿಚಾರದಲ್ಲಿ ಐಕ್ಯತೆ ತೋರಬೇಕು ಎನ್ನುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಹಾಗೂ ಇಂಡಿಯಾ ಒಕ್ಕೂಟವು ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಬೆಂಬಲಕ್ಕೆ ನಿಂತಿರುವುದು ಸ್ವಾಗಾತರ್ಹ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮೋದಿ ವಿಶ್ವ ನಾಯಕರಾಗಿ ಬೆಳೆದಿದ್ದಾರೆ. ಉಗ್ರರ ವಿಚಾರದಲ್ಲಿ ಭಾರತಕ್ಕೆ ಅನೇಕ ರಾಷ್ಟ್ರಗಳು ಬೆಂಬಲ ಸೂಚಿಸಿದೆ. ಪತ್ಯುತ್ತರವಾಗಿ ಉಗ್ರರ ಶೋಧಕ್ಕೆ ಭಾರತ ಈಗಾಗಲೇ ಶುರು ಮಾಡಿದ್ದು, ಯಾವ ಕ್ರಮ ತೆಗೆದುಕೊಳ್ಳಬೇಕೋ ಅದನ್ನು ಕೈಗೊಳ್ಳುತ್ತದೆ ಎಂದರು.
ಕುಮಾರಣ್ಣನ ನಾಯಕತ್ವಕ್ಕೆ ಭಗವಂತ ಎಷ್ಟು ದಿನ ಆಯಸ್ಸು ಕೊಡುತ್ತಾನೋ ಗೊತ್ತಿಲ್ಲ. ನಮ್ಮ ಪಕ್ಷಕ್ಕೆ ಅವರು ನಾಯಕರು. ನನ್ನ ಶಕ್ತಿ ಮೀರಿ ಅವರ ಕೈ ಬಲಪಡಿಸುವ ಕೆಲಸ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ರಾಜ್ಯ ಪ್ರವಾಸ ಮಾಡುತ್ತೇನೆ ಎಂದರು.