ಮಣಿಪುರ: ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಹೊಸ ನಾಯಕನನ್ನು ಹೆಸರಿಸಲು ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕತ್ವ ವಿಫಲವಾದ ಕಾರಣ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಗಿದೆ. ಗೃಹ ಸಚಿವಾಲಯ (MHA) ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಇನ್ಮುಂದೆ ಮಣಿಪುರ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಘೋಷಿಸಿದೆ.
ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದಲ್ಲಿ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿ, ಸಾವಿರಾರು ಜನರು ಸ್ಥಳಾಂತರಗೊಂಡಿದ್ದರು. ಮಣಿಪುರದಲ್ಲಿ 21 ತಿಂಗಳಿಂದ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ಇದಾದ ನಂತರ ಬಿರೇನ್ ಸಿಂಗ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಮುಂದಿನ ಮುಖ್ಯಮಂತ್ರಿ ಯಾರೆಂಬುದರ ಬಗ್ಗೆ ಬಿಜೆಪಿ ಹೈಕಮಾಂಡ್ ಮಾತುಕತೆ ನಡೆಸುತ್ತಿದೆ. ಆದರೆ ಇನ್ನೂ ಯಾವುದೇ ಒಮ್ಮತಕ್ಕೆ ಬರಲು ಸಾಧ್ಯವಾಗಲಿಲ್ಲ.
ಪತ್ರಾ ಮತ್ತು ಶಾಸಕರ ನಡುವೆ ಹಲವು ಸುತ್ತಿನ ಚರ್ಚೆ ನಡೆದರೂ ಸಿಎಂ ಸ್ಥಾನಕ್ಕೆ ಹೊಸ ನಾಯಕನನ್ನು ಹೆಸರಿಸಲು ಬಿಜೆಪಿ ವಿಫಲವಾಗಿದೆ.
ಪತ್ರಾ ಅವರು ಕಳೆದ ಎರಡು ದಿನಗಳಿಂದ ಎರಡು ಬಾರಿ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಭೇಟಿ ಮಾಡಿದ್ದಾರೆ. ಮಂಗಳವಾರ, ಪಕ್ಷದ ರಾಜ್ಯಾಧ್ಯಕ್ಷೆ ಎ ಶಾರದಾ ದೇವಿ ಅವರೊಂದಿಗೆ ಪಾತ್ರಾ ಅವರು ಭಲ್ಲಾ ಅವರೊಂದಿಗೆ ಮಾತುಕತೆ ನಡೆಸಿದರು ಮತ್ತು ಬುಧವಾರ ಅವರು ಮತ್ತೆ ರಾಜ್ಯಪಾಲರನ್ನು ಭೇಟಿ ಮಾಡಿದರು.
ಇದೇ ವೇಳೆ ಕಾಂಗ್ರೆಸ್ ಶಾಸಕ ತೊಕ್ಚೊಮ್ ಲೋಕೇಶ್ವರ್, ಪತ್ರಾ ಅವರ ರಾಜ್ಯ ಭೇಟಿಯ ಉದ್ದೇಶವನ್ನು ಪ್ರಶ್ನಿಸಿದ್ದು, ನಾಯಕತ್ವದ ಬಿಕ್ಕಟ್ಟನ್ನು ಪರಿಹರಿಸುವ ಉದ್ದೇಶವಿದೆಯೇ ಎಂದು ಕೇಳಿದರು.