ಲಕ್ನೋ : ವಸತಿ ಮತ್ತು ನಗರ ವ್ಯವಹಾರಗಳ ಕಾರ್ಯದರ್ಶಿ ದುರ್ಗಾ ಶಂಕರ್ ಮಿಶ್ರಾ ಅವರನ್ನು ಉತ್ತರ ಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಉತ್ತರ ಪ್ರದೇಶ ಕೇಡರ್ನ 1984ನೇ ಬ್ಯಾಚ್ನ ಐಎಎಸ್ ಅಧಿಕಾರಿ ದುರ್ಗಾ ಶಂಕರ್ ಮಿಶ್ರಾ ಅವರು ಶುಕ್ರವಾರ ನಿವೃತ್ತಿ ಹೊಂದಬೇಕಿತ್ತು. ಆದರೆ ಉತ್ತರ ಪ್ರದೇಶ ರಾಜ್ಯ ಸರ್ಕಾರ ಅವರನ್ನು ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಳಿಸಲು ಸಂಪುಟದ ನೇಮಕಾತಿ ಸಮಿತಿಯು ಅನುಮೋದಿಸಿದೆ ಎಂದು ತಿಳಿಸಿದೆ.
1985 ರ ಬ್ಯಾಚ್ ಐಎಎಸ್ ಅಧಿಕಾರಿ ರಾಜೇಂದ್ರ ಕುಮಾರ್ ತಿವಾರಿ ಅವರು ಪ್ರಸ್ತುತ ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ. ರಾಜೇಂದ್ರ ಕುಮಾರ್ ತಿವಾರಿ ಅವರು ಫೆಬ್ರವರಿ 2023 ರಲ್ಲಿ ನಿವೃತ್ತರಾಗಲಿದ್ದಾರೆ.
ಡಿಸೆಂಬರ್ 31 ರಂದು ನಿವೃತ್ತಿ ಹೊಂದಿದ ಬಳಿಕ ದುರ್ಗಾ ಶಂಕರ್ ಮಿಶ್ರಾ ಅವರು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.