ತನ್ನ ಕುಟುಂಬದವರನ್ನು ಅವಮಾನಿಸಿದವರ ವಿರುದ್ಧ ಸೂಕ್ರ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಉಚ್ಚಾಟಿತ ನಾಯಕ ದಯಾಶಂಕರ ಸಿಂಗ್ ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಒತ್ತಾಯಿಸಿದ್ದಾರೆ. , ಬಿಎಸ್‌ಪಿ ನಾಯಕಿ ಮಾಯಾವತಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ನಿನ್ನೆ ತಾನೇ ಬಂಧನಕ್ಕೊಳಗಾಗಿರುವ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬಿಹಾರದ ಬುಕ್ಸಾರ್‌ನಲ್ಲಿ ಬಂಧನಕ್ಕೊಳಗಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ನನ್ನ ಕುಟುಂಬವನ್ನು ಅವಮಾನಿಸಿದವರ ಕ್ರಮ ಕೈಗೊಳ್ಳಬೇಕು. ನಸೀಮುದ್ದೀನ್ ಸಿದ್ದಿಕಿ ಅವರನ್ನು ಬಂಧನಕ್ಕೊಳಪಡಿಸುವಂತೆ ನಾನು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರಿಗೆ ಸವಾಲು ಹಾಕುತ್ತೇನೆ ಎಂದಿದ್ದಾರೆ.
ಕಳೆದ ಜುಲೈ 20 ರಂದು ಬಹುಜನ ಸಮಾಜವಾದಿ ಮುಖ್ಯಸ್ಥೆ ಮಾಯಾವತಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ದಯಾಶಂಕರ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಅವರ ಹೇಳಿಕೆ ವಿರುದ್ಧ ಸಂಸತ್ತಿನಲ್ಲಿ ಸಹ ವ್ಯಾಪಕ ಖಂಡನೆ ವ್ಯಕ್ತವಾದ ಪರಿಣಾಮ ಬಿಜೆಪಿ ಅವರನ್ನು 6 ತಿಂಗಳ ಮಟ್ಟಿಗೆ ಪಕ್ಷದಿಂದ ಉಚ್ಚಾಟಿಸಿತ್ತು.
ಲಕ್ನೋ ಎಸ್‌ಸಿ/ಎಸ್‌ಟಿ ನ್ಯಾಯಾಲಯ ಹೊರಡಿಸಿದ್ದ ಜಾಮೀನು ರಹಿತ ವಾರಂಟ್ ಬಳಿಕ ಪೊಲೀಸರು ಅವರನ್ನು ಹುಡುಕಾಡಲು ಪ್ರಾರಂಭಿಸಿದ್ದರು.
ನಿನ್ನೆ ಅವರನ್ನು ಬಕ್ಸಾರ್‌ನಲ್ಲಿ ಬಂಧಿಸಲಾಗಿತ್ತು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.