Publish Date: Thu, 10 Feb 2022 (10:27 IST)
Updated Date: Thu, 10 Feb 2022 (11:59 IST)
ಲಕ್ನೋ : ಮತದಾರರು ತಪ್ಪು ಮಾಡಿದರೆ ಉತ್ತರ ಪ್ರದೇಶವು ಕಾಶ್ಮೀರ, ಕೇರಳ ಅಥವಾ ಪಶ್ಚಿಮ ಬಂಗಾಳದಂತೆ ಆಗಬಹುದು.
ಆದ್ದರಿಂದ ಪ್ರತಿಯೊಬ್ಬರು ಯೋಚಿಸಿ ಮತದಾನ ಮಾಡಿ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮನವಿ ಮಾಡಿದರು.
ಈ ಬಗ್ಗೆ ವೀಡಿಯೋ ಟ್ವೀಟ್ ಮಾಡಿರುವ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಭಯ ಮುಕ್ತ ಜೀವನ ನಡೆಸಲು ಸಾಧ್ಯವಾಗುತ್ತದೆ. ಕಳೆದ ಐದು ವರ್ಷಗಳ ನನ್ನ ಶ್ರಮಕ್ಕೆ ನಿಮ್ಮ ಮತವೇ ವರದಾನವಾಗಿದೆ.
ಕಳೆದ ಐದು ವರ್ಷಗಳಲ್ಲಿ ಬಹಳಷ್ಟು ಅಭಿವೃದ್ಧಿ ಪರ ಕೆಲಸಗಳು ನಡೆದಿವೆ. ಮತದಾರರು ಎಚ್ಚರ ತಪ್ಪಿದರೆ ಈ ಐದು ವರ್ಷಗಳ ದುಡಿಮೆ ಹಾಳಾಗುತ್ತದೆ. ಇದಕ್ಕೆ ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. ಕ್ಷಣ ಮಾತ್ರದಲ್ಲಿ ಉತ್ತರಪ್ರದೇಶವು ಕಾಶ್ಮೀರ, ಕೇರಳ ಮತ್ತು ಬಂಗಾಳವಾಗಲಿದೆ ಎಂದು ವೀಡಿಯೋದಲ್ಲಿ ಹೇಳಿದರು.