Select Your Language

Notifications

webdunia
webdunia
webdunia
webdunia

ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯ ಬರ್ಬರ ಹತ್ಯೆ

ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯ ಬರ್ಬರ ಹತ್ಯೆ
ಬಿಜ್ನೋರ್ , ಶನಿವಾರ, 1 ಜುಲೈ 2017 (11:45 IST)
ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ನಲ್ಲಿ ನಡೆದಿದೆ. ಹತ್ಯೆಯಾದ ಪೊಲೀಸ್ ಅಧಿಕಾರಿ ಸರ್ಹೋಜ್ ಸಿಂಗ್ ಎಂದು ತಿಳಿದುಬಂದಿದೆ.
 
ಸಿಂಗ್ ಮಂಡವಾರ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಬಂದ ದುಷ್ಕರ್ಮಿಗಳು ಸರ್ಹೋಜ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿ ಅವರ ಕತ್ತನ್ನು ಸೀಳಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
 
ನಡು ರಸ್ತೆಯಲ್ಲಿ ಸಹ್ರೋಜ್ ಅವರ ಮೃತದೇಹ ದೊರಕಿದ್ದು, ದೇಹದ ಮೇಲೆ ಹಲವಾರು ಗಾಯಗಳಿರುವುದು ಕಂಡುಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳ ಪತ್ತೆಗೆ ಶೋಧ ನಡೆಸಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ಮಂಡಳಿ ರಚಿಸಿದರೆ ಮಾತ್ರ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಗೆ ಬೆಂಬಲ: ಪಿಎಂಕೆ ಷರತ್ತು