Webdunia - Bharat's app for daily news and videos

Install App

ವಾರಣಾಸಿಯಲ್ಲಿ ಪ್ರಧಾನಿ ಮೋದಿ ಕಾಣೆಯಾಗಿದ್ದಾರೆ ಎನ್ನುವ ಪೋಸ್ಟರ್ ಸಮರ

Webdunia
ಶನಿವಾರ, 19 ಆಗಸ್ಟ್ 2017 (19:54 IST)
ಉತ್ತರ ಪ್ರದೇಶದಲ್ಲಿ' ಕಾಣೆಯಾಗಿದ್ದಾರೆ ಎನ್ನುವ ಪೋಸ್ಟರ್ ಸಮರ ಮುಂದುವರಿದಿದ್ದರೂ ಅದನ್ನು ಲಗತ್ತಿಸಿದವರು ಯಾರು ಎನ್ನುವುದು ಯಕ್ಷ ಪ್ರಶ್ನೆಯಾಗಿಯೇ ಉಳಿದಿದೆ.
ಕಳೆದ ಕೆಲ ದಿನಗಳ ಹಿಂದೆ ರಾಯಬರೇಲಿ ಮತ್ತು ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾಣೆಯಾಗಿದ್ದಾರೆ ಎನ್ನುವ ಪೋಸ್ಟರ್‌ಗಳು ಕಂಡುಬಂದಿದ್ದವು. ಇದೀಗ ಪ್ರಧಾನಿ ಮೋದಿ ಕಾಣೆಯಾಗಿದ್ದಾರೆ ಎನ್ನುವ ಪೋಸ್ಟರ್‌ಗಳು ವಾರಣಾಸಿಯಲ್ಲಿ ಕಂಡು ಬರುತ್ತಿವೆ.
 
ಮೂಲಗಳ ಪ್ರಕಾರ, ಶುಕ್ರವಾರ ರಾತ್ರಿ ವಾರಣಾಸಿ ಪಟ್ಟಣದಲ್ಲಿರುವ ಕುಚೆರ್ರಿಯ ಪ್ರದೇಶದಲ್ಲಿರುವ ಕಟ್ಟಡಗಳ ಗೋಡೆಗಳ ಮೇಲೆ ಪ್ರಧಾನಿ ಮೋದಿ ಕಾಣೆಯಾಗಿದ್ದಾರೆ ಎನ್ನುವ ಹಲವಾರು ಪೋಸ್ಟರ್‌ಗಳು ಕಂಡು ಬಂದಿವೆ.
 
ಯಾವುದೇ ಹೆಸರನ್ನು ಹೊಂದಿರದ ಪೋಸ್ಟರ್‌ಗಳು, ಗಝಲ್ ಹಾಡುಗಾರ ಜಗ್‌ಜಿತ್ ಸಿಂಗ್ ಹಾಡಿದ 'ಘಝಲ್' ಹಾಡುಗಳನ್ನು ಪೋಸ್ಟರ್‌ಗಳಲ್ಲಿ ಉಲ್ಲೇಖಿಸಲಾಗಿದೆ. '' ಜಾನೇ ವೊ ಕೌನ್ ಸಾ ದೇಶ್ ಜಹಾ ತುಮ್ ಚೆಲೇ ಗಯೇ '' (ನೀವು ಯಾವ ರಾಷ್ಟ್ರಕ್ಕೆ ಹೋಗಿದ್ದೀರಿ ಎಂದು ತಿಳಿದಿಲ್ಲ), ಎನ್ನುವ ಹಾಡು ಹೊಂದಿರುವ ಪೋಸ್ಟರ್‌ಗಳಲ್ಲಿ ಮೋದಿ ಫೋಟೋ ಲಗತ್ತಿಸಲಾಗಿದೆ.
 
ಪೋಸ್ಟರ್‌ಗಳನ್ನು ಪತ್ತೆಹಚ್ಚಿದ ಬಳಿಕ ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಂಡು ಅವುಗಳನ್ನು ತೆಗೆದುಹಾಕಿದೆ ಎಂದು ಮೂಲಗಳು ತಿಳಿಸಿವೆ. ಪೋಸ್ಟರ್‌ಗಳನ್ನು ಹಾಕಿದವರ ಪತ್ತೆಗಾಗಿ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.
 
ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ವಿಧಾನಸಭೆ ಉಪಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ತಮ್ಮ ಸ್ವಂತ ಕ್ಷೇತ್ರವಾದ ವಾರಣಾಸಿಗೆ ಆಗಮಿಸಿದ್ದನ್ನು ಸ್ಮರಿಸಬಹುದು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments