Webdunia - Bharat's app for daily news and videos

Install App

ಯುಪಿಎಸ್‌ಸಿ ಫಲಿತಾಂಶ ಪ್ರಕಟ: 1009 ಮಂದಿ ನೇಮಕಾತಿ, ಟಾಪರ್‌ ಶಕ್ತಿ ದುಬೆ ಓದಿದ್ದೇನು ಗೊತ್ತಾ

Sampriya
ಮಂಗಳವಾರ, 22 ಏಪ್ರಿಲ್ 2025 (15:49 IST)
Photo Courtesy X
ನವದೆಹಲಿ: ಕೇಂದ್ರ ಲೋಕಸೇವಾ ಆಯೋಗಯು ನಾಗರಿಕ ಸೇವಾ ಪರೀಕ್ಷೆ  2025 ರ ಅಂತಿಮ ಫಲಿತಾಂಶವನ್ನು ಇಂದು ಘೋಷಿಸಿದೆ. ವಾರಣಾಸಿಯ ಶಕ್ತಿ ದುಬೆ ಅಗ್ರಸ್ಥಾನ ಗಳಿಸಿದ್ದಾರೆ, ಹರಿಯಾಣದ ಹರ್ಷಿತಾ ಗೋಯಲ್ ಎರಡನೇ ಸ್ಥಾನ ಮತ್ತು ಡೊಂಗ್ರೆ ಅರ್ಚಿತ್ ಪರಾಗ್ ಮೂರನೇ ಸ್ಥಾನ ಗಳಿಸಿದ್ದಾರೆ.

ಐಎಎಸ್, ಐಪಿಎಸ್, ಐಎಫ್‌ಎಸ್ ಮತ್ತು ಕೇಂದ್ರ ಸೇವೆಗಳ ಗ್ರೂಪ್ ಎ ಮತ್ತು ಬಿ ನಂತಹ ಸೇವೆಗಳಲ್ಲಿ ನೇಮಕಾತಿಗಾಗಿ ಯುಪಿಎಸ್‌ಸಿ 1009 ಅಭ್ಯರ್ಥಿಗಳನ್ನು ಶಿಫಾರಸು ಮಾಡಿದೆ. ಇವರಲ್ಲಿ 725 ಪುರುಷರು ಹಾಗೂ 284 ಮಹಿಳೆಯರು ಸೇರಿದ್ದಾರೆ.

ಅಲಹಾಬಾದ್ ವಿಶ್ವವಿದ್ಯಾಲಯದಿಂದ ಜೀವರಸಾಯನ ವಿಜ್ಞಾನದಲ್ಲಿ ಪದವಿ ಪಡೆದಿರುವ ದುಬೆ, ಲೋಕಸೇವಾ ಆಯೋಗದ ಪರೀಕ್ಷೆಗೆ ರಾಜಕೀಯ ವಿಜ್ಞಾನ ಮತ್ತು ಅಂತರರಾಷ್ಟ್ರೀಯ ವ್ಯವಹಾರ ವಿಷಯಗಳನ್ನು ಆಯ್ಕೆ ಮಾಡಿಕೊಂಡಿದ್ದರು.

ಬರೋಡಾದ ಎಂಎಸ್ ವಿಶ್ವವಿದ್ಯಾಲಯದಿಂದ ಬಿ.ಕಾಂ. ಪದವಿ ಪಡೆದಿರುವ ಹರ್ಷಿತಾ ಗೋಯಲ್ ಅವರು ರಾಜಕೀಯ ವಿಜ್ಞಾನ ಮತ್ತು ಅಂತರರಾಷ್ಟ್ರೀಯ ವ್ಯವಹಾರ ವಿಷಯಗಳನ್ನು ಆಯ್ಕೆ ಮಾಡಿಕೊಂಡಿದ್ದರು. ವೆಲ್ಲೋರ್‌ನ ವಿಐಟಿ ಕಾಲೇಜಿನಿಂದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಷಯದಲ್ಲಿ ಬಿ.ಟೆಕ್. ಎಂಜಿನಿಯರಿಂಗ್ ಪದವಿ ಪಡೆದಿರುವ ಡೊಂಗ್ರೆ ಅರ್ಚಿತ್ ಪರಾ ತತ್ವಶಾಸ್ತ್ರವನ್ನು ಮುಖ್ಯ ಪರೀಕ್ಷೆಗೆ ಆಯ್ಕೆ ಮಾಡಿಕೊಂಡಿದ್ದರು.

ಮೊದಲು ಐದು ರ‍್ಯಾಂಕ್‌ಗಳಲ್ಲಿ ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಇದ್ದಾರೆ.  2024ರ ಕೇಂದ್ರ ಲೋಕಸೇವಾ ಆಯೋಗದ ಪೂರ್ವಭಾವಿ ಪರೀಕ್ಷೆಯು ಜೂನ್ 16ರಂದು ನಡೆದಿತ್ತು. 9,92,599 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಇವರಲ್ಲಿ 5,83,213 ಅಭ್ಯರ್ಥಿಗಳು ಮಾತ್ರ ಪರೀಕ್ಷೆ ಬರೆದಿದ್ದರು.

ಮುಖ್ಯ ಪರೀಕ್ಷೆಗೆ 14,627 ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಕಳೆದ ಸೆಪ್ಟೆಂಬರ್‌ನಲ್ಲಿ ಮುಖ್ಯ ಪರೀಕ್ಷೆ ನಡೆದಿತ್ತು. ಇವರಲ್ಲಿ 2,845 ಅಭ್ಯರ್ಥಿಗಳು ಸಂದರ್ಶನ ಹಂತಕ್ಕೆ ಆಯ್ಕೆಯಾಗಿದ್ದರು. ಐಎಎಸ್, ಐಎಫ್‌ಎಸ್, ಐಪಿಎಸ್ ಸೇರಿದಂತೆ ಕೇಂದ್ರ ಲೋಕಸೇವಾ ಆಯೋಗ ನಡೆಸುವ ಕೇಂದ್ರ ನಾಗರಿಕ ಸೇವಾ ಪರೀಕ್ಷೆಯ ವಿವಿಧ ಹುದ್ದೆಗಳಿಗೆ ಅಂತಿಮವಾಗಿ 1,009 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶರಬತ್‌ ಜಿಹಾದ್‌ ಹೇಳಿಕೆಗೆ ಸ್ವೀಕಾರರ್ಹವಲ್ಲ: ಬಾಬಾ ರಾಮ್‌ದೇವ್‌ ವಿರುದ್ಧ ಡೆಲ್ಲಿ ಹೈಕೋರ್ಟ್‌ ಗರಂ

Wing commander assault: ಭಾಷೆ ವಿಚಾರಕ್ಕೆ ಇನ್ನೊಬ್ಬರ ಮೇಲೆ ಹಲ್ಲೆ ನಡೆಸುವ ಸಣ್ಣ ಬುದ್ಧಿ ಕನ್ನಡಿಗರದ್ದಲ್ಲ: ಸಿದ್ದರಾಮಯ್ಯ ಗುಡುಗು

ವಿದೇಶಗಳಲ್ಲಿ ರಾಷ್ಟ್ರ ಗೌರವಕ್ಕೆ ಧಕ್ಕೆ ತಂದ ರಾಹುಲ್ ಗಾಂಧಿ: ಬಿವೈ ವಿಜಯೇಂದ್ರ

ದುಬೈನಿಂದ ಬಂದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಹತ್ಯೆಗೈದು ಸೂಟ್‌ಕೇಸ್‌ನಲ್ಲಿ ತುಂಬಿದ ಪತ್ನಿ

Hizab vs Janeu: ನಿಮಗೆ ಜನಿವಾರ ಎಷ್ಟು ಮುಖ್ಯವೋ ನಮಗೆ ಹಿಜಾಬ್ ಕೂಡಾ ಮುಖ್ಯ: ಅಲಿಯಾ ಅಸ್ಸಾದಿ ಟ್ವೀಟ್ ಕಿಡಿ

ಮುಂದಿನ ಸುದ್ದಿ
Show comments