ಭೋಪಾಲ್ : ಆದಿವಾಸಿ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದಲ್ಲಿ ಬಂಧನಕ್ಕೊಳಗಾದ ಪ್ರವೇಶ್ ಶುಕ್ಲಾ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರವಾಗಿ ಮಧ್ಯಪ್ರದೇಶ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.
ರಾಷ್ಟ್ರೀಯ ಭದ್ರತಾ ಕಾಯಿದೆಯಡಿ ಆರೋಪಿಯ ಬಂಧನ ಪ್ರಶ್ನಿಸಿ ಪ್ರವೇಶ್ ಶುಕ್ಲಾ ಪತ್ನಿ ಕಂಚನ್ ಶುಕ್ಲಾ ಮನವಿ ಸಲ್ಲಿಸಿದ್ದಳು. ಅಲ್ಲದೇ ರಾಜಕೀಯ ಕಾರಣಕ್ಕೆ ಪತಿಯನ್ನು ಬಂಧಿಸಲಾಗಿದೆ ಎಂದು ಆಕೆ ಆರೋಪಿಸಿದ್ದಾಳೆ.
ಬಂಧನದ ವಿರುದ್ಧ ಅಧಿಕಾರಿಗಳಿಗೆ ಪ್ರತಿಕ್ರಿಯೆ ನೀಡಲು ಅವಕಾಶ ಕೊಡದೆ ಪ್ರವೇಶ್ ಶುಕ್ಲಾ ವಿರುದ್ಧ ಎನ್ಎಸ್ಎ ಕಾಯಿದೆ ಅನ್ವಯಿಸಲಾಗಿದೆ ಎಂದು ಅರ್ಜಿದಾರರ ಪರ ವಕೀಲ ಅನಿರುದ್ಧ ಕುಮಾರ್ ಮಿಶ್ರಾ ನ್ಯಾಯಾಲಯದಲ್ಲಿ ವಾದಿಸಿದ್ದಾರೆ.