Daily Horoscope
✕

ಜಿ20 ಶೃಂಗಸಭೆಗೆ ಅಮೆರಿಕ ಅಧ್ಯಕ್ಷರ ಪ್ರವಾಸ

Webdunia
ಮಂಗಳವಾರ, 5 ಸೆಪ್ಟಂಬರ್ 2023 (13:03 IST)
ನವದೆಹಲಿ : ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಪತ್ನಿ ಜಿಲ್ ಬೈಡನ್ (72) ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅವರಿಗೆ ಸಾಮಾನ್ಯ ರೋಗಲಕ್ಷಣಗಳು ಕಾಣಿಸಿಕೊಂಡಿವೆ ಎಂದು ಶ್ವೇತಭವನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಅನಾರೋಗ್ಯದ ಹಿನ್ನಲೆ ಸೋಮವಾರ ಸಂಜೆ ಅವರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿತ್ತು. ಪರೀಕ್ಷೆಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ಈ ಬಗ್ಗೆ ಅವರ ಮಾಧ್ಯಮ ಸಲಹೆಗಾರರಾದ ಎಲಿಜಬೆತ್ ಅಲೆಕ್ಸಾಂಡರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸದ್ಯ ಜಿಲ್ ಬೈಡನ್ ಅವರು ಡೆಲವೇರ್ನ ರೆಹೋಬೋತ್ ಬೀಚ್ನಲ್ಲಿರುವ ನಿವಾಸದಲ್ಲಿ ಕ್ವಾರಂಟೈನ್ ಆಗಿದ್ದಾರೆ. ಅವರಿಗೆ ಕಳೆದ ವರ್ಷ ಆಗಸ್ಟ್ನಲ್ಲೂ ಕೋವಿಡ್ ಸೋಂಕು ಪತ್ತೆಯಾಗಿತ್ತು.

ಜಿಲ್ ಬೈಡನ್ಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನಲೆ ಅಧ್ಯಕ್ಷ ಬೈಡನ್ ಅವರಿಗೆ ಕೋವಿಡ್ ಪರೀಕ್ಷೆಯನ್ನು ನಡೆಸಲಾಗಿದೆ ಎಂದು ಶ್ವೇತಭವನ ತಿಳಿಸಿದೆ. ಪರೀಕ್ಷೆಯಲ್ಲಿ ಅಧ್ಯಕ್ಷರಲ್ಲಿ ಕೊರೊನಾ ನೆಗೆಟಿವ್ ವರದಿ ಬಂದಿದೆ. ಅಧ್ಯಕ್ಷರನ್ನು ಈ ವಾರ ನಿಯಮಿತವಾಗಿ ಪರೀಕ್ಷಿಸಲಾಗುತ್ತದೆ. ಈ ವೇಳೆ ರೋಗಲಕ್ಷಣಗಳ ಮೇಲ್ವಿಚಾರಣೆ ಮಾಡಲಾಗುತ್ತದೆ.

ಸದ್ಯ ಅವರು ಭಾರತದಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಅದಕ್ಕಾಗಿ ಸೆ.7 ರಂದು ಭಾರತಕ್ಕೆ ಆಗಮಿಸುತ್ತಿದ್ದಾರೆ. ಸೆ.8 ರಂದು ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದು, 9 ಹಾಗೂ 10 ರಂದು ನಡೆಯಲಿರುವ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದ 10 ವರ್ಷಗಳಲ್ಲಿ ವಿಶ್ವಬ್ಯಾಂಕ್ನಲ್ಲಿ ಭಾರತದ ಸಾಲ ತಗ್ಗಿದೆಯೇ, ಅಂಕಿಅಂಶಗಳು ಹೇಳುವ ಸತ್ಯವೇನು

ಹಿರಿಯೂರು ಉಪಚುನಾವಣೆ ಕಾವು: ದೋಸ್ತಿಗಳ ಟಿಕೆಟ್ ಪೈಪೋಟಿ ಕೈ ಪಾಳಯಕ್ಕೆ ವರವಾಗಲಿದೆಯೇ

ಗಂಡ ಹೆಂಡತಿ ನಡುವೆ ಹೊಂದಾಣಿಕೆ ಎಷ್ಟಿದೆ ತಿಳಿಯಲು ಈ ಪ್ರಶ್ನಾವಳಿ ಟೆಸ್ಟ್ ಮಾಡಿ

ನಿಮ್ಮ ಜಮೀನಿನ ಮೂಲ ದಾಖಲೆಗಳು ಕಳೆದುಹೋಗಬಾರದೇ, ಆಸ್ತಿ ಪತ್ರಗಳನ್ನು ಜೋಪಾನವಾಗಿಡಲು ಈ 4 ಸ್ಮಾರ್ಟ್ ವಿಧಾನಗಳನ್ನು ಅನುಸರಿಸಿ

ಎಸ್ಎಸ್ಎಲ್ಸಿ ಪಾಸಾದ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಸಿಗುವ ಟಾಪ್ 5 ಸ್ಕಾಲರ್ಶಿಪ್ಗಳಿವು

ಮುಂದಿನ ಸುದ್ದಿ
Show comments