ಉತ್ತರಪ್ರದೇಶ: ಬಿಜೆಪಿ ಶಾಸಕನ ಸಂಬಂಧಿಯನ್ನು ಹೊಡೆದು ಹತ್ಯೆ

Sampriya
ಭಾನುವಾರ, 10 ನವೆಂಬರ್ 2024 (11:12 IST)
ಪಿಲಿಭಿತ್ (ಉತ್ತರ ಪ್ರದೇಶ): ಬಿಜೆಪಿ ಶಾಸಕ ಬಾಬುರಾಮ್ ಪಾಸ್ವಾನ್ ಅವರ ಸಂಬಂಧಿ ಫೂಲ್‌ಚಂದ್ ಅವರನ್ನು ದುಷ್ಕರ್ಮಿಗಳು ಭೀಕರವಾಗಿ ಹೊಡೆದು  ಹತ್ಯೆ ಮಾಡಿರುವ ಘಟನೆ ಶನಿವಾರ ತಡರಾತ್ರಿ  ನಡೆದಿದೆ.

ದುಷ್ಕರ್ಮಿಗಳು ಫೂಲ್‌ಚಂದ್ ಅವರ ಮನೆಯ ಮೇಲೆ ಏಕಾಏಕಿ ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಫೂಲ್‌ಚಂದ್ ಸೇರಿದಂತೆ ಕುಟುಂಬಸ್ಥರನ್ನು ಮನಸೋಇಚ್ಛೆ ಥಳಿಸಿ ಅವರ ಮೊಮ್ಮಗಳನ್ನು ಕಿಡ್ನ್ಯಾಪ್ ಮಾಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಘುಂಗ್‌ಚಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಉದ್ರಾಹ್ ಗ್ರಾಮದಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ 70 ವರ್ಷದ ಫೂಲ್‌ಚಂದ್ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪಿಲಿಭಿತ್ ಪೊಲೀಸ್ ವರಿಷ್ಠಾಧಿಕಾರಿ ಅವಿನಾಶ್ ಪಾಂಡೆ ತಿಳಿಸಿದ್ದಾರೆ.

ಘಟನೆ ಸಂಬಂಧ ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಇತರೆ ಆರೋಪಿಗಳಿಗೆ ಹುಡುಕಾಟ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments