Select Your Language

Notifications

webdunia
webdunia
webdunia
webdunia

ರಕ್ಷಣೆ ಕೋರಿ ಬಂದ ಸಹೊದರಿಯರಿಗೆ ಪೊಲೀಸರು ಮಾಡಿದ್ದೇನು...? ಕ್ಯಾಮರಾದಲ್ಲಿ ಸೆರೆ

Caught On Camera
ಲಖನೌ , ಭಾನುವಾರ, 4 ಜೂನ್ 2017 (17:03 IST)
ಮೈನ್ಪುರಿ:  ಇಡೀ ಪೊಲೀಸ್ ಇಲಾಖೆಯೇ ತಲೆ ತಗ್ಗಿಸುವಂತಹ ಘಟನೆ ಇದು. ರಕ್ಷಣೆ ನೀಡಬೇಕಾದ ಪೊಲೀಸರೆ ಇಬ್ಬರು ಸಹೋದರಿಯರಿಗೆ ಕಿರುಕುಳ ನೀಡುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.
 
ಉತ್ತರ ಪ್ರದೇಶದ ಕರ್ಹಾಲ್ ಗೇಟ್ ಪೊಲೀಸ್ ಠಾಣೆಯಲ್ಲಿ ಇಂತದ್ದೊಂದು ಘಟನೆ ನಡೆದಿದ್ದು, ಕಿರುಕುಳಕ್ಕೆ ಸಂಬಂಧಿಸಿದಂತೆ ದೂರು ನೀಡಲು ಪೊಲೀಸ್ ಠಾಣೆಗೆ ಬಂದ ಇಬ್ಬರು ಸಹೋದರಿಯರಿಗೆ ಪೊಲೀಸ್ ಅಧಿಕಾರಿಯೊಬ್ಬರು ಕಿರುಕುಳ ನೀಡಿದ್ದಾರೆ. ಅದರ ವಿಡಿಯೋ ಇದೀಗ ವೈರಲ್ ಆಗಿದೆ.
 
ಠಾಣೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ತಮ್ಮೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಸಹೋದರಿಯರು ಆರೋಪಿಸಿದ್ದಾರೆ. ಇದಕ್ಕೆ ಪುಷ್ಟಿ ನೀಡುವಂತೆ ವಿಡಿಯೋದಲ್ಲಿ ಪೊಲೀಸ್ ಅಧಿಕಾರಿ ಈಶ್ವರಿ ಪ್ರಸಾದ್ ಅವರು ಯುವತಿಗೆ ಅಸಭ್ಯ ರೀತಿಯಲ್ಲಿ ಟಚ್ ಮಾಡುತ್ತಿರುವ ದೃಶ್ಯ ಸೆರೆಯಾಗಿದೆ. ಈ ಮಧ್ಯೆ, ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿರುವ ಆರೋಪಿ ಪೊಲೀಸರು, ವ್ಯಕ್ತಿಯೊಬ್ಬರು ತಮ್ಮ ಪ್ಯಾಂಟ್ ಹಿಡಿದು ಎಳೆದು ಅವಮಾನಿಸಿದ್ದಾರೆ ಎಂದು ಆರೋಪಿಸಿ ಯುವತಿಯರು ದೂರು ನೀಡಲು ಬಂದಿದ್ದರು ಎಂದು ಹೇಳಿದ್ದಾರೆ. ಅಲ್ಲದೆ ನಾನು ಅವರ ಕೈ ಹಿಡಿದಿದ್ದೇನೆ ಅಷ್ಟೆ. ಅವರಿಗೆ ಕೀಟಲೆ ಮಾಡಿಲ್ಲ ಎಂದು  ಹೇಳಿದ್ದಾರೆ.
 
ಸಾಮಾಜಿಕ ತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಎಸ್ ಅವರು, ಪ್ರಸಾದ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ನಟಿ ಮೇಘನಾ ರಾಜ್ ಮನೆ ಮುಂದೆ ಪ್ರತಿಭಟನೆ