Select Your Language

Notifications

webdunia
webdunia
webdunia
webdunia

ಉತ್ತರಾಖಂಡ್: ಮತ್ತೆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ

ಉತ್ತರಾಖಂಡ್
ಉತ್ತರಾಖಂಡ್‌ ನೈನಿತಾಲ್ ಹೈಕೋರ್ಟ್ ರಾಷ್ಟ್ರಪತಿ ಆಳ್ವಿಕೆ ವಜಾಗೊಳಿಸಿ ನೀಡಿದ ತೀರ್ಪಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. 
 
ಮುಖ್ಯಮಂತ್ರಿ ಹರೀಶ್ ರಾವತ್ ಸರಕಾರ ಪರ ಹೈಕೋರ್ಟ್ ತೀರ್ಪು ನೀಡಿರುವುದರ ವಿರುದ್ಧ ಕೇಂದ್ರ ಸರಕಾರ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ, ಮುಂದಿನ ವಿಚಾರಣೆಯನ್ನು ಏಪ್ರಿಲ್ 27ಕ್ಕೆ ಮುಂದೂಡಿದೆ. 
 
ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು, ರಾಷ್ಟ್ರಪತಿಗಳ ನಿರ್ಧಾರವನ್ನು ಪ್ರಶ್ನಿಸುವ ಅಧಿಕಾರ ಹೈಕೋರ್ಟ್ ಇಲ್ಲ. ಹೀಗಾಗಿ ಕೂಡಲೇ ಹೈಕೋರ್ಟ್ ಆದೇಶಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದರು,
 
ನೈನಿತಾಲ್ ಹೈಕೋರ್ಟ್ ಏಪ್ರಿಲ್ 29 ರಂದು ಬಹುಮತ ಸಾಬೀತುಪಡಿಸುವಂತೆ ಮುಖ್ಯಮಂತ್ರಿ ಹರೀಶ್ ರಾವತ್‌ಗೆ ಆದೇಶ ನೀಡಿತ್ತು. ಇದೀಗ ಸುಪ್ರೀಂಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ್ದರಿಂದ, ಮತ್ತೆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಬಂದಿದೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada