Select Your Language

Notifications

webdunia
webdunia
webdunia
webdunia

ಉತ್ತರಾಖಂಡ ಹಿಮಕುಸಿತ: ಮತ್ತೊಬ್ಬ ಕಾರ್ಮಿಕನ ಮೃತದೇಹ ಪತ್ತೆ, ಮೃತರ ಸಂಖ್ಯೆ ಐದಕ್ಕೆ ಏರಿಕೆ

ಉತ್ತರಾಖಂಡ ಹಿಮಕುಸಿತ: ಮತ್ತೊಬ್ಬ ಕಾರ್ಮಿಕನ ಮೃತದೇಹ ಪತ್ತೆ, ಮೃತರ ಸಂಖ್ಯೆ ಐದಕ್ಕೆ ಏರಿಕೆ

Sampriya

ಉತ್ತರಾಖಂಡ , ಭಾನುವಾರ, 2 ಮಾರ್ಚ್ 2025 (13:54 IST)
Photo Courtesy X
ಉತ್ತರಾಖಂಡ: ಉತ್ತರಾಖಂಡ ರಾಜ್ಯದ ಚಮೋಲಿ ಜಿಲ್ಲೆಯ ಮನ ಗ್ರಾಮದ ಬಳಿ ಫೆ.28 ರಂದು ಸಂಭವಿಸಿದ ಹಿಮಪಾತದಲ್ಲಿ ನಾಪತ್ತೆಯಾಗಿದ್ದ ಮತ್ತೊಬ್ಬ ವ್ಯಕ್ತಿಯ ಮೃತದೇಹವನ್ನು ಸೇನೆ ಪತ್ತೆ ಮಾಡಿದೆ.

ಇದರೊಂದಿಗೆ ಹಿಮಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿದ್ದು, ನಾಪತ್ತೆಯಾಗಿರುವ ಉಳಿದ ಮೂವರು ವ್ಯಕ್ತಿಗಳ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ.  ಹಿಮಪಾತದಲ್ಲಿ ಸಿಲುಕಿದ್ದ 50 ಕಾರ್ಮಿಕರನ್ನು ಈತನಕ ರಕ್ಷಿಸಲಾಗಿದೆ.  

ನಾಪತ್ತೆಯಾದ ಉಳಿದ ಕಾರ್ಮಿಕರಿಗಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಸೇನೆ, ಐಟಿಬಿಪಿ, ವಾಯುಪಡೆ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸೇರಿದಂತೆ ಹಲವು ಪಡೆಗಳು ಕಾರ್ಯನಿರ್ವಹಿಸುತ್ತಿವೆ. ನಾಪತ್ತೆಯಾದ ಕಾರ್ಮಿಕರ ಪತ್ತೆಗೆ ನೆಲಕ್ಕೆ ನುಗ್ಗುವ ರಾಡಾರ್, ಥರ್ಮಲ್ ಇಮೇಜಿಂಗ್ ಕ್ಯಾಮೆರಾಗಳು ಮತ್ತು  ಕ್ಯಾಮೆರಾಗಳನ್ನು ಬಳಸಲಾಗುತ್ತಿದೆ ಎಂದು ಅವರು ಹೇಳಿದರು.

ಭಾರತೀಯ ವಾಯುಪಡೆಯ ಅಧಿಕಾರಿಗಳ ಪ್ರಕಾರ, ಉತ್ತರಾಖಂಡದ ಚಮೋಲಿ ಜಿಲ್ಲೆಯ ಹಿಮಕುಸಿತ ಪೀಡಿತ ಪ್ರದೇಶಗಳಲ್ಲಿ ಇಂದು ಶೋಧ ಕಾರ್ಯಾಚರಣೆಗಾಗಿ ಡ್ರೋನ್ ಆಧಾರಿತ ಇಂಟೆಲಿಜೆಂಟ್ ಬರಿಡ್ ಆಬ್ಜೆಕ್ಟ್ ಡಿಟೆಕ್ಷನ್ ಸಿಸ್ಟಮ್ ಅನ್ನು ಎಐ 47 ಅನ್ನು ಹೆಲಿಕಾಪ್ಟರ್ ಏರ್‌ಲಿಫ್ಟ್ ಮಾಡಿದೆ.

 

 

Share this Story:

Follow Webdunia kannada

ಮುಂದಿನ ಸುದ್ದಿ

ಪವಿತ್ರ ರಂಜಾನ್ ಮಾಸ ಇಂದಿನಿಂದ: ಪ್ರಧಾನಿ ಮೋದಿಯಿಂದ ಮುಸ್ಲಿಮರಿಗೆ ಶುಭಾಶಯ