Publish Date: Thu, 16 Aug 2018 (09:01 IST)
Updated Date: Thu, 16 Aug 2018 (09:03 IST)
ನವದೆಹಲಿ: ಅನಾರೋಗ್ಯದಿಂದಾಗಿ ಏಮ್ಸ್ ಆಸ್ಪತ್ರೆಯಲ್ಲಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ.
ಕಳೆದ 34 ಗಂಟೆಗಳಿಂದ ವಾಜಪೇಯಿ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎನ್ನಲಾಗಿದ್ದು, ಇಂದು 10 ಗಂಟೆಗೆ ದೆಹಲಿಯ ಏಮ್ಸ್ ಆಸ್ಪತ್ರೆ ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿದ್ದಾರೆ.
ಇಂದು ಬೆಳಿಗ್ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದಾರೆ. ವಾಜಪೇಯಿ ಭೇಟಿಗೆ ಗಣ್ಯರ ದಂಡೇ ಹರಿದುಬರುತ್ತಿದೆ. ಸದ್ಯಕ್ಕೆ ವಾಜಪೇಯಿಗೆ ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದೆ. ಕಳೆದ 24 ಗಂಟೆಗಳಿಂದ ಅವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.