ವಂದೇ ಭಾರತ ರೈಲು ಹಾವೇರಿಯಲ್ಲಿ ನಿಲುಗಡೆಗೆ ಆದೇಶ: ವಿ ಸೋಮಣ್ಣಗೆ ಧನ್ಯವಾದ ಸಲ್ಲಿಸಿದ ಬೊಮ್ಮಾಯಿ

Sampriya
ಬುಧವಾರ, 2 ಏಪ್ರಿಲ್ 2025 (15:10 IST)
ಬೆಂಗಳೂರು: ಧಾರವಾಡ-ಬೆಂಗಳೂರು ಮಧ್ಯ ಸಂಚರಿಸುವ ವಂದೇ ಭಾರತ ರೈಲು ಹಾವೇರಿಯಲ್ಲಿ ನಿಲುಗಡೆಗೆ ಆದೇಶ ನೀಡಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್  ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಅವರಿಗೆ ಸಂಸದ ಬಸವರಾಜ ಬೊಮ್ಮಾಯಿ ಅವರು ಧನ್ಯವಾದ ಸಲ್ಲಿಸಿದ್ದಾರೆ.

ಈ ಬಗ್ಗೆ ಅವರು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಹಾಕಿ ಬರೆದುಕೊಂಡಿದ್ದಾರೆ.

ಭಾರತ ದೇಶದಲ್ಲಿ ಕಳೆದ ಹತ್ತು ವರ್ಷ ಎಲ್ಲ ರಂಗದಲ್ಲಿ ಬಹಳ ದೊಡ್ಡ ಕ್ರಾಂತಿಯಾಗಿದೆ ವಿಶೇಷವಾಗಿ ರೈಲ್ವೆ ಸಂಪರ್ಕ, ಡಿಜಿಟಲ್, ಆರೋಗ್ಯ,  ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯಾಗಿದೆ. ಜಗತ್ತಿನಲ್ಲಿಯೇ ಅತಿ ದೊಡ್ಡ ರೈಲ್ವೆ  ಜಾಲ ಹೊಂದಿರುವ ದೇಶ ಭಾರತ ಕರ್ನಾಟಕದಲ್ಲಿ ಅತಿ ಹೆಚ್ಚು ರೈಲ್ವೆ ಲೈನು ಆಗಿರುವುದ ಕಳೆದ ಹತ್ತು ವರ್ಷದ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ,  ಕೇಂದ್ರ ಸರ್ಕಾರ ಕರ್ನಾಟಕದ ರೈಲ್ವೆ
ಯೋಜನೆಗಳ ಅಭಿವೃದ್ದಿಗೆ ಕಳೆದ ವರ್ಷ 7 ಸಾವಿರ ಕೋಟಿ ರೂ. ಹಾಗೂ  ಈ ವರ್ಷ 7 ಸಾವಿರ ಕೋಟಿ ರೂ. ಅನುದಾನ ನೀಡಿದೆ. ವಿಶೇಷವಾಗಿ ರೈಲ್ವೆ ಲೈನುಗಳ ವಿದ್ಯುದೀಕರಣ ಆಗಿದೆ. ಇದರ ಪರಿಣಾಮ ಅತಿವೇಗವಾಗಿ ಹೋಗುವ ವಂದೇ ಭಾರತ ರೈಲು ಕರ್ನಾಟಕದಲ್ಲಿ ಆರಂಭವಾಗಿದೆ. ಇದಕ್ಕೆಲ್ಲ  ಪ್ರಧಾನಿ ನರೇಂದ್ರ ಮೋದಿಯವರ ದೊರ ದೃಷ್ಟಿ ಕಾರಣ.

ಬೆಂಗಳೂರ - ಧಾರವಾಡ ಮಧ್ಯ ಸಂಚರಿಸುವ ವಂದೇ ಭಾರತ ರೈಲು  ಕೇವಲ ಐದು ಗಂಟೆಯಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿ ಧಾರವಾಡಕ್ಕೆ ಬರುತ್ತದೆ.  ಇದು ಕೇವಲ ತುಮಕೂರು, ದಾವಣಗೆರೆ, ಹುಬ್ಬಳ್ಳಿ-ಧಾರವಾಡದಲ್ಲಿ ನಿಲ್ಲುಗಡೆ ಮಾಡಲಾಗುತ್ತಿತ್ತು. ಈ ರೈಲು ಹಾವೇರಿಯಲ್ಲಿಯೂ ನಿಲುಗಡೆಯಾಗಬೇಕೆಂದು ಹಾವೇರಿ ಜಿಲ್ಲೆಯ ಜನರ ಬಹುದಿನಗಳ ಒತ್ತಾಸೆಯಾಗಿತ್ತು‌. ಹಾವೇರಿ ಈ ಕಡೆ ಶಿರ್ಸಿ, ಕಾರವಾರ ಕಡಲು ಕರ್ನಾಟಕ ಹಾಗೂ ಬಳ್ಳಾರಿ ಸೇರಿದಂತೆ  ಕಲ್ಯಾಣ ಕರ್ನಾಟಕದ ನಡುವೆ ಸಂಪರ್ಕ ಕೇಂದ್ರವಾಗಿದೆ. ಹೀಗಾಗಿ ವಂದೇ ಭಾರತ ರೈಲು ಹಾವೇರಿಯಲ್ಲಿ ನಿಲುಗಡೆ ಆಗಬೇಕೆಂದು ಹಾವೇರಿ ಮಹಾಜನತೆ, ಚೇಂಬರ್ ಆಫ್ ಕಾಮರ್ಸ್ ಬೇಡಿಕೆ ಇತ್ತು. ಜಿಲ್ಲೆಯ ಜನರ ಬೇಡಿಕೆಯನ್ನು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್  ಅವರ ಮೇಲೆ ಒತ್ತಡ ಹೇರಿ ಹಾಗೂ  ನಮ್ಮ ರಾಜ್ಯದವರೇ ಆದ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೊಮಣ್ಣ ಅವರಿಗೆ ಮನವಿ ಮಾಡಿದ್ದೆ, ಅವರು  ಸಕಾರಾತ್ಮಕವಾಗಿ ಸ್ಪಂದಿಸಿ ಹಾವೇರಿಯಲ್ಲಿ ವಂದೇ ಭಾರತ ರೈಲು ನಿಲುಗಡೆಗೆ ಆದೇಶ ನೀಡಿದ್ದಾರೆ. ಸದ್ಯ ಇದು ಟ್ರಾಯಲ್ ಬೇಸಿಸ್ ಆಗಿದೆ‌. ಪ್ರಯಾಣಿಕರ ಸಂಖ್ಯೆ ಹೆಚ್ಚಳವಾದರೆ ಕಾಯಂ ಮಾಡುತ್ತಾರೆ. ಈ ರೈಲು ನಿಲುಗಡೆಯ ಉದ್ಘಾಟನೆ  ದಿನಾಂಕವನ್ನು ಶೀಘ್ರವೇ  ನಿಗದಿ ಮಾಡುತ್ತಾರೆ‌. ಹಾವೇರಿಯಲ್ಲಿ ವಂದೇ ಭಾರತ ರೈಲು ನಿಲುಗಡೆಯಾಗಿಸುವಲ್ಲಿ ಯಶಸ್ಸಿಯಾದ ಹಾವೇರಿ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ‌. ಹಾವೇರಿಯ ಜನತೆ ವಂದೇ ಭಾರತ ರೈಲನ್ನು ಹೆಚ್ಚು ಬಳಕೆ ಮಾಡಿಕೊಳ್ಳಬೇಕು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಸಿಎಂ ಬದಲಾವಣೆ ಚರ್ಚೆಯ ನಡುವೆ ಸ್ಫೋಟಕ ಹೇಳಿಕೆ ಕೊಟ್ಟ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments