Publish Date: Thu, 14 May 2026 (12:24 IST)
Updated Date: Thu, 14 May 2026 (12:27 IST)
ತಿರುವನಂತಪುರಂ: ಕೊನೆಗೂ ಕೇರಳಂ ಹೊಸ ಮುಖ್ಯಮಂತ್ರಿಯ ಘೋಷಣೆಯಾಗಿದೆ. ವಿಡಿ ಸತೀಶನ್ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.
ಕೇರಳಂ ವಿಧಾನಸಭೆ ಚುನಾವಣೆ ಫಲಿತಾಂಶ ಬಂದು 10 ದಿನವಾಗಿದ್ದರೂ ಸಿಎಂ ಘೋಷಣೆಯಾಗಿರಲಿಲ್ಲ. ಈ ಬಗ್ಗೆ ವಿಪಕ್ಷಗಳಿಂದ ಟೀಕೆಗಳೂ ಕೇಳಿಬರತೊಡಗಿದ್ದವು. ಕೊನೆಗೂ ಇಂದು ನೂತನ ಸಿಎಂ ಯಾರು ಎಂದು ಘೋಷಣೆಯಾಗಿದೆ.
ವಿಡಿ ಸತೀಶನ್, ರಮೇಶ್ ಚೆನ್ನಿತ್ತಲ ಮತ್ತು ಕೆಸಿ ವೇಣುಗೋಪಾಲ್ ನಡುವೆ ತೀವ್ರ ಪೈಪೋಟಿಯಿತ್ತು. ಇದರಿಂದಾಗಿ ಸಿಎಂ ಆಯ್ಕೆ ಮಾಡುವುದು ಕಾಂಗ್ರೆಸ್ ಹೈಕಮಾಂಡ್ ಗೆ ದೊಡ್ಡ ತಲೆನೋವಾಗಿತ್ತು. ಇದೀಗ ವಿಡಿ ಸತೀಶನ್ ಗೆ ಅವಕಾಶ ನೀಡಲಾಗಿದೆ.
140 ವಿಧಾನಸಭೆ ಕ್ಷೇತ್ರಗಳ ಪೈಕಿ 102 ಸ್ಥಾನಗಳನ್ನು ಗೆದ್ದುಕೊಂಡಿದ್ದ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಪ್ರಚಂಡ ಬಹುಮತದೊಂದಿಗೆ ಅಧಿಕಾರ ಪಡೆದಿದೆ. ಇದೀಗ ವಿಡಿ ಸತೀಶನ್ ಮುಖ್ಯಮಂತ್ರಿ ಎಂದು ಘೋಷಣೆಯಾಗುತ್ತಿದ್ದಂತೇ ಕೇರಳಂ ಕಾಂಗ್ರೆಸ್ ಕಚೇರಿ ಮುಂಭಾಗ ಸಂಭ್ರಮಾಚರಣೆ ಆರಂಭವಾಗಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ