Select Your Language

Notifications

webdunia
webdunia
webdunia
webdunia

ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಫೋಟ: ಓರ್ವನ ಸಾವು

ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಫೋಟ: ಓರ್ವನ ಸಾವು
ವೆಲ್ಲೂರು(ತಮಿಳುನಾಡು) , ಶನಿವಾರ, 6 ಫೆಬ್ರವರಿ 2016 (15:25 IST)
ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಸ್ಫೋಟದಿಂದಾಗಿ ಹಲವು ವಾಹನಗಳು ಜಖಂಗೊಂಡಿದ್ದು, ಸ್ಫೋಟದ ಕುರಿತಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಫೋಟ ಸಂಭವಿಸಿದ ಮಾಹಿತಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಶ್ವಾನದಳ ಮತ್ತು ಬಾಂಬ್ ನಿಷ್ಕ್ರೀಯ ದಳ ತಂಡಗಳು ಸ್ಥಳದಲ್ಲಿ ತನಿಖೆ ಮುಂದುವರಿಸಿವೆ ಎನ್ನಲಾಗಿದೆ.
 
ಸ್ಫೋಟ ಸಂಭವಿಸಿದ ಸ್ಥಳವನ್ನು ಪೊಲೀಸರು ಸುತ್ತುವರೆದಿದ್ದು, ಕಾಲೇಜಿನಲ್ಲಿರುವ ಸಿಸಿಟಿವಿಗಳನ್ನು ಪರೀಕ್ಷಿಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  

Share this Story:

Follow Webdunia kannada