Select Your Language

Notifications

webdunia
webdunia
webdunia
webdunia

ಪರಿಸರಕ್ಕೆ ತಮ್ಮ ಇಡೀ ಜೀವನ ಮುಡಿಪಾಗಿಟ್ಟ ವಿಜ್ಞಾನಿ ಮಾಧವ ಗಾಡ್ಗೀಳ್ ಇನ್ನಿಲ್ಲ

Madhav Gadgil
Photo Credit: X
ಬೆಂಗಳೂರು: ಪರಿಸರಕ್ಕಾಗಿ ತಮ್ಮ ಇಡೀ ಜೀವನ ಮುಡಿಪಾಗಿಟ್ಟಿದ್ದ ಖ್ಯಾತ ವಿಜ್ಞಾನಿ ಮಾಧವ ಗಾಡ್ಗೀಳ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ಕಳೆದ ಕೆಲವು ಸಮಯದಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇದೀಗ ಪುಣೆ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಐದು ದಶಕಗಳಿಗೂ ಹೆಚ್ಚು ಕಾಲ ಪರಿಸರ ಕಾಳಜಿಗಾಗಿ ತಮ್ಮ ಜೀವನ ಮುಡಿಪಾಗಿಟ್ಟಿದ್ದರು. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಪರಿಸರ ಕೇಂದ್ರದ ಸಂಸ್ಥಾಪಕರಾಗಿದ್ದರು.

ಪಶ್ಚಿಮ ಘಟ್ಟಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಮಾಡುವುದು,ಕಾಮಗಾರಿಗಳನ್ನು ಕೈಗೊಳ್ಳುವುದು ಪರಿಸರಕ್ಕೆ ಹಾನಿಕಾರಕ ಎಂದು ಪ್ರತಿಪಾದಿಸುತ್ತಲೇ ಬಂದಿದ್ದರು. 2010 ರಲ್ಲಿ ಪಶ್ಚಿಮಘಟ್ಟಗಳ ಪರಿಸರ ವಿಜ್ಞಾನ ತಜ್ಞರ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡರು.

ಪರ್ವತ ಪರಿಸರದಲ್ಲಿ ಗಣಿಗಾರಿಕೆ, ಕಲ್ಲು ಗಣಿಗಾರಿಕೆಗಳನ್ನು ವಿರೋಧಿಸಿದ್ದ ಅವರು ಇಂತಹ ಚಟುವಟಿಕೆಗಳನ್ನು ನಿಯಂತ್ರಿಸಬೇಕು ಎಂದು ಎಚ್ಚರಿಕೆ ನೀಡುತ್ತಲೇ ಬಂದಿದ್ದರು. ಕೇವಲ ಪರಿಸರವಾದಿ ಮಾತ್ರವಲ್ಲ, ಲೇಖಕರು, ಅಂಕಣಕಾರರಾಗಿಯೂ ಗುರುತಿಸಿಕೊಂಡಿದ್ದರು. ಪುಣೆಯಲ್ಲಿ ಜನಿಸಿದ್ದ ಅವರು ಜೀವಶಾಸ್ತ್ರದ ಪದವಿ, ಮುಂಬೈ ವಿಶ್ವವಿದ್ಯಾಲಯದಲ್ಲಿ ಪ್ರಾಣಿಶಾಸ್ತ್ರದ ಪದವಿ, ಹಾರ್ವರ್ಡ್ ವಿವಿಯಲ್ಲಿ ಪಿಎಚ್ ಡಿ ಪದವಿ ಪಡೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

Karnataka Weather: ವಿಪರೀತ ಚಳಿ ನಡುವೆ ಇಂದು ಕೆಲವೆಡೆ ಮೋಡ ಕವಿದ ವಾತಾವರಣ