Publish Date: Wed, 30 Sep 2020 (09:57 IST)
Updated Date: Wed, 30 Sep 2020 (09:59 IST)
ನವದೆಹಲಿ : ದಿನೇ ದಿನೇ ಕೊರೊನಾ ಮಹಾಮಾರಿಯ ಹಾವಳಿ ಹೆಚ್ಚಾಗುತ್ತಿದ್ದು, ಇದೀಗ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಕೊರೊನಾ ಸೋಂಕಿಗೆ ತಗುಲಿರುವುದಾಗಿ ತಿಳಿದುಬಂದಿದೆ.
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಮಂಗಳವಾರ ಕೊರೊನಾ ಟೆಸ್ಟ್ ಗೆ ಒಳಪಟ್ಟಿದ್ದರು, ಅದರ ವರದಿ ಬಂದಿದ್ದು, ಅದರಲ್ಲಿ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಆದರೆ ಅವರಿಗೆ ಯಾವುದೇ ರೋಗ ಲಕ್ಷಣಗಳು ಕಂಡುಬಂದಿಲ್ಲ ಎನ್ನಲಾಗಿದೆ.
ಇದೀಗ ಅವರು ಆರೋಗ್ಯವಾಗಿದ್ದು, ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.