Select Your Language

Notifications

webdunia
webdunia
webdunia
webdunia

ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್‌ ಮೈತ್ರಿಕೂಟಕ್ಕೆ ಜಯ: ಮುಖ್ಯಮಂತ್ರಿಯಾಗಿ ಒಮರ್‌ ಅಬ್ದುಲ್ಲಾ

National Conference, Jammu and Kashmir Chief Minister Omar Abdullah, Former CM Farooq Abdullah

Sampriya

ಶ್ರೀನಗರ , ಮಂಗಳವಾರ, 8 ಅಕ್ಟೋಬರ್ 2024 (14:12 IST)
Photo Courtesy X
ಶ್ರೀನಗರ: ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌, ಕಾಂಗ್ರೆಸ್‌ ಮೈತ್ರಿಕೂಟ ಮೇಲುಗೈ ಸಾಧಿಸಿದ ಬೆನ್ನಲ್ಲೇ ನೂತನ ಮುಖ್ಯಮಂತ್ರಿಯಾಗಿ ಒಮರ್‌ ಅಬ್ದುಲ್ಲಾ ಆಯ್ಕೆ ಆಗಿದ್ದಾರೆ.

ಜಮ್ಮು ಕಾಶ್ಮೀರ ಚುನಾವಣೆಯಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌, ಕಾಂಗ್ರೆಸ್‌ ಮೈತ್ರಿಕೂಟ ಜಯಗಳಿಸಿದ ಬೆನ್ನಲ್ಲೇ ಮಾಜಿ ಸಿಎಂ ಫಾರೂಖ್‌ ಅಬ್ದುಲ್ಲಾ ಅವರು ಒಮರ್‌ ಅಬ್ದುಲ್ಲಾ ಅವರನ್ನು ಮುಂದಿನ ಸಿಎಂ ಎಂದು ಘೋಷಣೆ ಮಾಡಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷನಾಗಿರುವ ಒಮರ್ ಅಬ್ದುಲ್ಲಾ ಬುದ್ಗಾಮ್ ಮತ್ತು ಗಂದರ್ಬಾಲ್ ಕ್ಷೇತ್ರಗಳಿಂದ ಸ್ಪರ್ಧಿಸಿ ಗೆದ್ದಿದ್ದಾರೆ. ಅಬ್ದುಲ್ಲಾ ಕುಟುಂಬಕ್ಕೆ ಮೂರು ತಲೆಮಾರುಗಳಿಂದ ಗಂದೇರ್ಬಾಲ್ ಕ್ಷೇತ್ರ ಭದ್ರಕೋಟೆಯಾಗಿದೆ.

ಎನ್‌ಸಿ ಸಂಸ್ಥಾಪಕ ಶೇಖ್ ಮೊಹಮ್ಮದ್ ಅಬ್ದುಲ್ಲಾ ಅವರು 1977 ರಲ್ಲಿ ಈ ಕ್ಷೇತ್ರದಲ್ಲಿ ಗೆದ್ದಿದ್ದರು. ನಂತರ ಅವರ ಮಗ ಫಾರೂಕ್ ಅಬ್ದುಲ್ಲಾ ಅವರು 1983, 1987 ಮತ್ತು 1996 ರಲ್ಲಿ ವಿಜಯಗಳಿಸಿದರು. ನಂತರ ಒಮರ್ ಅಬ್ದುಲ್ಲಾ ಅವರು 2008 ರಲ್ಲಿ ಕ್ಷೇತ್ರದಿಂದ ಆಯ್ಕೆಯಾದರು.

ಬುದ್ಗಾಮ್‌ನಲ್ಲಿ ಅಬ್ದುಲ್ಲಾ ಅವರು ಪಿಡಿಪಿಯ ಅಗಾ ಸೈಯದ್ ಮುಂತಜೀರ್ ಮೆಹದಿ ಮತ್ತು ಅವಾಮಿ ನ್ಯಾಷನಲ್ ಕಾನ್ಫರೆನ್ಸ್‌ನ ಅಗಾ ಸೈಯದ್ ಅಹ್ಮದ್ ಮೂಸ್ವಿ ಸೇರಿದಂತೆ 7 ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಿದ್ದರು.

ಆರಂಭದಿಂದಲೂ ಎನ್‌ಸಿ ಮತ್ತು ಕಾಂಗ್ರೆಸ್‌ ಮುನ್ನಡೆ ಸಿಕ್ಕಿತ್ತು. ಮಧ್ಯಾಹ್ನ 2 ಟ್ರೆಂಡ್‌ ಪ್ರಕಾರ ಎನ್‌ಸಿ ಮತ್ತು ಕಾಂಗ್ರೆಸ್‌ ಮೈತ್ರಿಕೂಟ 51ಕ್ಷೇತ್ರ, ಬಿಜೆಪಿ 27 ಪಿಡಿಪಿ 02 ಇತರರು 10 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. 2014ರಲ್ಲಿ ನಡೆದ ಚುನಾವಣೆಯಲ್ಲಿ ಪಿಡಿಪಿ 28, ಬಿಜೆಪಿ 25, ನ್ಯಾಷನಲ್‌ ಕಾನ್ಫರೆನ್ಸ್‌ 15 ಸ್ಥಾನಗಳನ್ನು ಗೆದ್ದುಕೊಂಡಿತ್ತು.


Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ವಿಚಾರದ ಪ್ರಚಾರದಿಂದ ಹರಿಯಾಣ ಚುನಾವಣೆಯಲ್ಲಿ ಹಿನ್ನಡೆ: ಕೋಳಿವಾಡ