Daily Horoscope
✕

ಬಸ್ ಹತ್ತುವಾಗ ಜಸ್ಟ್ ಮಿಸ್: ಬಸ್ ಕ್ಲೀನರ್ ಇಲ್ಲದೇ ಇದ್ದಿದ್ದರೆ ಈ ವೃದ್ಧನ ಕತೆ ಏನಾಗ್ತಿತ್ತೋ Video

ಕೃಷ್ಣವೇಣಿ ಕೆ
ಶನಿವಾರ, 29 ಆಗಸ್ಟ್ 2026 (10:34 IST)
ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬೀಳಲಿದ್ದ ವೃದ್ಧ ಪ್ರಯಾಣಿಕರೊಬ್ಬರನ್ನು ಬಸ್ ಕ್ಲೀನರ್ ಸಮಯಪ್ರಜ್ಞೆಯಿಂದ ರಕ್ಷಿಸಿ, ರಿಯಲ್ ಹೀರೋ ಎನಿಸಿಕೊಂಡಿದ್ದಾರೆ.
 
ಘಟನೆಯ ವಿವರ:
ಕುಟ್ಟಿಯಾಟ್ಟೂರ್ ಮತ್ತು ಕಣ್ಣೂರು ಮಾರ್ಗವಾಗಿ ಚಲಿಸುವ 'ಪಾರ್ವತಿ' ಹೆಸರಿನ ಖಾಸಗಿ ಬಸ್‌ನಲ್ಲಿ ಈ ಹೃದಯಸ್ಪರ್ಶಿ ಘಟನೆ ನಡೆದಿದೆ. ವೃದ್ಧ ಪ್ರಯಾಣಿಕರೊಬ್ಬರು ಬಸ್ ಹತ್ತಲು ಯತ್ನಿಸುತ್ತಿದ್ದಾಗ ಹಠಾತ್ತಾಗಿ ಆಯತಪ್ಪಿ ಕೆಳಗೆ ಬೀಳಲು ತೊಡಗಿದ್ದಾರೆ.
 
ಅದೇ ಬಸ್‌ನಲ್ಲಿ ಕ್ಲೀನರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅತುಲ್ ಕುಕು ಎಂಬ ಯುವಕ, ತಕ್ಷಣವೇ ಎಚ್ಚೆತ್ತುಕೊಂಡು, ಕ್ಷಣಮಾತ್ರದಲ್ಲಿ ವೃದ್ಧರನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಅತುಲ್ ಅವರ ಈ ಮಿಂಚಿನ ವೇಗದ ಪ್ರಕ್ರಿಯೆಯಿಂದಾಗಿ ವೃದ್ಧರು ರಸ್ತೆಗೆ ಬಿದ್ದು ಸಂಭವಿಸಬಹುದಾಗಿದ್ದ ದೊಡ್ಡ ಅಪಾಯ ಹಾಗೂ ಗಂಭೀರ ಗಾಯಗಳಿಂದ ಪಾರಾಗಿದ್ದಾರೆ.
 
ಸಮಯಪ್ರಜ್ಞೆಗೆ ಶಹಬ್ಬಾಸ್:
ಸರಿಯಾದ ಸಮಯಕ್ಕೆ ಸ್ಪಂದಿಸಿದ ಅತುಲ್ ಅವರ ಕರುಣೆ ಹಾಗೂ ಸಾಹಸಮಯ ಕಾರ್ಯಕ್ಕೆ ಸಾರ್ವಜನಿಕರಿಂದ ತೀವ್ರ ಪ್ರಶಂಸೆ ವ್ಯಕ್ತವಾಗುತ್ತಿದೆ. ಮಾನವೀಯತೆ, ಕಾಳಜಿ ಮತ್ತು ಸಹಾಯ ಮಾಡುವ ಮನೋಭಾವ ಇಂದಿನ ಸಮಾಜಕ್ಕೆ ಅತ್ಯಂತ ಅಗತ್ಯ ಎಂಬುದನ್ನು ಅತುಲ್ ಸಾಬೀತುಪಡಿಸಿದ್ದಾರೆ.
 
ಸರಿಯಾದ ಸಮಯದಲ್ಲಿ ಕಾರ್ಯಪ್ರವೃತ್ತರಾಗಿ ಜೀವ ರಕ್ಷಿಸಿದ ಬಸ್ ಕ್ಲೀನರ್ ಅತುಲ್ ಕುಕು ಅವರ ಈ ಸತ್ಕಾರ್ಯಕ್ಕೆ ಸಾರ್ವಜನಿಕರು ಮತ್ತು ನೆಟ್ಟಿಗರು ಹೆಮ್ಮೆಯಿಂದ ಹ್ಯಾಟ್ಸ್ ಆಫ್ ಹೇಳುತ್ತಿದ್ದಾರೆ.
pic.twitter.com/PtnMcIguWJ

 

— Karnataka Portfolio (@karnatakaportf) August 29, 2026

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments