Daily Horoscope

Select Your Language

Notifications

webdunia
webdunia
webdunia
webdunia

ಮಗು ಕಾರಿನಡಿಗೆ ಬಿದ್ದರೂ ಕಣ್ಣಿಗೆ ಕಾಣಿಸಿಲ್ಲಾಂದ್ರೆ ಇವನೆಂಥಾ ಡ್ರೈವರ್… ಭೀಕರ ಅಪಘಾತ Video

Child dragged by car
ಕಾನ್ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ಆಘಾತಕಾರಿ ರಸ್ತೆ ಅಪಘಾತವೊಂದರಲ್ಲಿ, ವೇಗವಾಗಿ ಬಂದ ಕಾರೊಂದು ಮಗುವಿಗೆ ಡಿಕ್ಕಿ ಹೊಡೆದು, ಕೆಲ ಮೀಟರ್‌ಗಳಷ್ಟು ದೂರ ಎಳೆದೊಯ್ದ ಭೀಕರ ಘಟನೆ ಸಂಭವಿಸಿದೆ. ಈ ಸಂಪೂರ್ಣ ಕೃತ್ಯ ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಕಳವಳ ವ್ಯಕ್ತವಾಗಿದೆ.
 
ಮಾಹಿತಿಗಳ ಪ್ರಕಾರ, ರಸ್ತೆಯಲ್ಲಿ ಚಲಿಸುತ್ತಿದ್ದ ಕಾರು ದಿಢೀರನೆ ಮಗುವಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಗು ಕಾರಿನ ಅಡಿಯಲ್ಲಿ ಸಿಲುಕಿಕೊಂಡರೂ, ಚಾಲಕ ಕಾರನ್ನು ನಿಲ್ಲಿಸದೇ ಮುನ್ನಡೆಸಿದ್ದಾನೆ. ಇದರಿಂದಾಗಿ ಮಗು ಕೆಲ ಮೀಟರ್‌ಗಳ ಕಾಲ ರಸ್ತೆಯಲ್ಲಿ ಎಳೆಯಲ್ಪಟ್ಟಿದೆ.
 
ಘಟನೆಯಲ್ಲಿ ಮಗುವಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯರು ಮಗುವನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಮಗುವಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
 
ಸ್ಥಳೀಯ ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿಸಿಟಿವಿ ಫೂಟೇಜ್‌ ಆಧಾರದ ಮೇಲೆ ಕಾರಿನ ನೋಂದಣಿ ಸಂಖ್ಯೆಯನ್ನು ಪತ್ತೆಹಚ್ಚಿ, ಪರಾರಿಯಾಗಿರುವ ಕಾರು ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
pic.twitter.com/lOFYaF72OV

 

— contentkikamii (@contentkikamii) August 14, 2026

Share this Story:

Follow Webdunia kannada

ಮುಂದಿನ ಸುದ್ದಿ

ವಿಡಿ ಸಾವರ್ಕರ್ ಅವಹೇಳನ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧದ ಕ್ರಿಮಿನಲ್ ಪ್ರಕರಣ ಸುಪ್ರೀಂ ರದ್ದು