Select Your Language

Notifications

webdunia
webdunia
webdunia
webdunia

ಹಸುವಿನ ಮೇಲೆ ಅತ್ಯಾಚಾರ ನಡೆಸಲು ಹೋಗಿ ಸಿಕ್ಕಿಬಿದ್ದ ವ್ಯಕ್ತಿ: ರೆಡ್ ಹ್ಯಾಂಡ್ ಆಗಿ ಹಿಡಿದ ಜನ ಮಾಡಿದ್ದೇನು Video

Madhya Pardesh cow rape
Photo Credit: X
ಮಧ್ಯಪ್ರದೇಶದ ರಾಜಧಾನಿ ಬೋಪಾಲ್‌ನಲ್ಲಿ ಮಾನವೀಯತೆ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ಹಸುವಿನ ಮೇಲೆ ಅತ್ಯಾಚಾರ ಎಸಗಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಸ್ಥಳೀಯ ಸಾರ್ವಜನಿಕರು ರೆಡ್‌ಹ್ಯಾಂಡ್‌ ಆಗಿ ಹಿಡಿದು ರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ವರದಿಯಾಗಿದೆ.
 
ವರದಿಗಳ ಪ್ರಕಾರ, ಆರೋಪಿಯು ಮೂಕ ಪ್ರಾಣಿಯ ಮೇಲೆ ಅತ್ಯಾಚಾರ ಎಸಗುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಆತನನ್ನು ಸುತ್ತುವರಿದಿದ್ದಾರೆ. ಈ ಅಮಾನವೀಯ ಕೃತ್ಯದಿಂದ ಆಕ್ರೋಶಗೊಂಡ ಸಾರ್ವಜನಿಕರು ಆತನಿಗೆ ರಸ್ತೆಯಲ್ಲೇ ತೀವ್ರ ಧರ್ಮದೇಟು ನೀಡಿದ್ದಾರೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರ ಸಮ್ಮುಖದಲ್ಲೇ ಆಕ್ರೋಶಿತ ಜನಸ್ತೋಮ ಆರೋಪಿಗೆ ಬಾರಿಸಿದೆ.
 
ನಂತರ ಪೊಲೀಸರು ಸಾರ್ವಜನಿಕರನ್ನು ಸಮಾಧಾನಪಡಿಸಿ, ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಮೂಕ ಪ್ರಾಣಿಯ ಮೇಲಿನ ಈ ವಿಕೃತ ಕೃತ್ಯಕ್ಕೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿಯ ವಿರುದ್ಧ ಪ್ರಾಣಿ ದೌರ್ಜನ್ಯ ತಡೆ ಕಾಯ್ದೆ ಹಾಗೂ ಸೂಕ್ತ ಕಾನೂನು ವಿಭಾಗಗಳ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
 
ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಆರೋಪಿಯ ವಿಕೃತ ಮನಸ್ಥಿತಿಗೆ ತೀವ್ರ ಧಿಕ್ಕಾರ ಕೂಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹನುಮನ ಪವಾಡ.. ಕ್ರೇನ್, ಜೆಸಿಬಿ ಬಂದರೂ ಒಂದಿಂಚೂ ಅಲ್ಲಾಡದ ಆಂಜನೇಯನ ವಿಗ್ರಹ: ಉಜ್ಜೈನಿಯಲ್ಲಿ ಕೌತುಕದ ಘಟನೆ Video