Publish Date: Mon, 27 Jul 2026 (11:38 IST)
Updated Date: Mon, 27 Jul 2026 (11:41 IST)
ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಸೇವರ್ಹಿ ನಗರ ಪಂಚಾಯತ್ ವ್ಯಾಪ್ತಿಯ ಕೋಚಿಂಗ್ ಸೆಂಟರ್ ಒಂದರಲ್ಲಿ ಲೈಂಗಿಕ ಕಿರುಕುಳ ಹಾಗೂ ಹೈರಾಣಿನ ಆರೋಪ ಎದುರಿಸುತ್ತಿದ್ದ ಶಿಕ್ಷಕನಿಗೆ ವಿದ್ಯಾರ್ಥಿನಿ ಹಾಗೂ ಆಕೆಯ ಕುಟುಂಬಸ್ಥರು ತಕ್ಕ ಪಾಠ ಕಲಿಸಿದ ಘಟನೆ ನಡೆದಿದೆ. ತರಗತಿಯ ಒಳಗಡೆಯೇ ವಿದ್ಯಾರ್ಥಿನಿ ಹಾಗೂ ಆಕೆಯ ಪೋಷಕರು ಆರೋಪಿ ಶಿಕ್ಷಕನಿಗೆ ಚಪ್ಪಲಿಯಿಂದ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸೀವರ್ಹಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಈ ಕೋಚಿಂಗ್ ಸೆಂಟರ್‌ನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಗೆ ಶಿಕ್ಷಕ ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಶಿಕ್ಷಕನ ಹಿಂಸೆ ತಾಳಲಾರದೆ ವಿದ್ಯಾರ್ಥಿನಿ ತನ್ನ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದಾಳೆ. ಕ್ರಾಸ್ ಚೆಕ್ ಮಾಡಲು ಕೋಚಿಂಗ್ ಸೆಂಟರ್‌ಗೆ ಆಗಮಿಸಿದ ಕುಟುಂಬಸ್ಥರು ಹಾಗೂ ಇತರರು, ತರಗತಿಯಲ್ಲೇ ಇದ್ದ ಆರೋಪಿ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ವೈರಲ್ ವಿಡಿಯೋ ಹಾಗೂ ವಿದ್ಯಾರ್ಥಿನಿಯ ದೂರಿನ ಆಧಾರದ ಮೇಲೆ ಸೀವರ್ಹಿ ಠಾಣೆ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಘಟನೆಯ ಸಂಪೂರ್ಣ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ವಿದ್ಯಾರ್ಥಿನಿಯರ ರಕ್ಷಣೆ ಮತ್ತು ಕೋಚಿಂಗ್ ಸೆಂಟರ್‌ಗಳಲ್ಲಿ ಮಹಿಳಾ ಸುರಕ್ಷತೆಯ ಕುರಿತು ಮತ್ತೊಮ್ಮೆ ಈ ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ