ಚೆನ್ನೈ: ತನ್ನ ಪ್ರಾಣವನ್ನು ಲೆಕ್ಕಿಸದೆ ವ್ಯಕ್ತಿಯೊಬ್ಬ ವಿದ್ಯುತ್ ಶಾಕ್‌ನಿಂದ ಕೊಳಚೆ ನೀರಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಬಾಲಕನನ್ನು ರಕ್ಷಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಈ ವಿಡಿಯೋ ನೋಡಿದವರು ಕಣ್ಣನ್ ಅವರ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಣ್ಣನ್ ತಮಿಜ್ಸೆಲ್ವನ್ ಎಂಬವವರು ತಮ್ಮ ಬೈಕ್‌ನಲ್ಲಿ ಬರುತ್ತಿದ್ದಾಗ ಬಾಲಕನೊಬ್ಬ ನೀರಿನಲ್ಲಿ ವಿದ್ಯುತ್ ಶಾಕ್ ತಗುಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ನೋಡಿದ್ದಾರೆ. ಕೂಡಲೇ ಹಿಂದೂ ಮುಂದೂ ನೋಡದ ಅವರು ಬಾಲಕನ ರಕ್ಷಣೆಗೆ ಮುಂದಾಗಿದ್ದಾರೆ.
ಏಪ್ರಿಲ್ 16 ರಂದು ಜೇಡನ್ ರಯಾನ್ (9) ಎಂಬ ಬಾಲಕ ವಿದ್ಯುತ್ ಶಾಕ್ ತಗುಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಕೊಳಚೆ ನೀರಿನಲ್ಲಿ ಬಿದ್ದಿದ್ದಾನೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಕಣ್ಣನ್ ಅವರು ಬಾಲಕನನ್ನು ರಕ್ಷಿಸಿದ ಸಿಸಿಟಿವಿ ದೃಶ್ಯಾವಳಿ ಶನಿವಾರ ವೈರಲ್ ಆಗಿದೆ. ಕಣ್ಣನ್ ಅವರ ದೈರ್ಯ ಹಾಗೂ ಮಾನವೀಯತೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ವೀಡಿಯೊದಲ್ಲಿ, ಕಣ್ಣನ್ ನೀರಿನಲ್ಲಿ ಓಡಿ ಹುಡುಗನನ್ನು ಹೊರಗೆ ಎಳೆಯುವ ಮೊದಲು ಕೆಲವು ಸೆಕೆಂಡುಗಳ ಕಾಲ ಗೊಂದಲಕ್ಕೊಳಗಾಗಿದ್ದಾನೆ. ಅವರು ಮಗುವನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸುವ ಮೊದಲು ಮಗುವಿಗೆ ಸಿಪಿಆರ್ ನೀಡಿದರು.