ಗುಜುರಾತ್ ನೂತನ ಮುಖ್ಯಮಂತ್ರಿಯಾಗಿ ವಿಜಯ್ ರೂಪಾನಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ವೇಳೆಯಲ್ಲಿ ರಾಜ್ಯಪಾಲ ಎ.ಪಿ ಕೊಹ್ಲಿ ಪ್ರಮಾಣ ವಚನ ಬೋಧಿಸಿದರು. ಇದೇ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಕೂಡ ಪ್ರಮಾಣ ವಚನ ಸ್ವೀಕರಿಸಿದ್ರು.
ಆನಂದಿಬೆನ್ ಅವರ ರಾಜಿನಾಮೆ ಬಳಿಕ ತೆರವಾಗಿದ್ದ ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿ ಹೈಕಮಾಂಡ್ ವಿಜಯ್ ರೂಪಾನಿ ಅವರನ್ನು ಆಯ್ಕೆ ಮಾಡಿದೆ..ಪ್ರಮಾಣ ವಚನ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಹಿರಿಯ ನಾಯಕ ಅರುಣ್ ಜೇಟ್ಲಿ, ಹಿರಿಯ ನಾಯಕ ಅಡ್ವಾಣಿ ಭಾಗಿಯಾಗಿದ್ದರು.
ಆರ್‌ಎಸ್‌ಎಸ್ ಹಿನ್ನೆಲೆಯಿಂದ ಬಂದಿರುವ 60 ವರ್ಷದ ವಿಜಯ್ ರೂಪಾಣಿ ಕಳೆದ ಅನೇಕ ಚುನಾವಣೆಗಳಲ್ಲಿ ಪಕ್ಷದ ನಾಯಕತ್ವ ವಹಿಸಿಕೊಂಡು ಯಶಸ್ವಿಯಾದ ಅನುಭವ ಹೊಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು
ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ