Publish Date: Wed, 03 Apr 2024 (15:39 IST)
Updated Date: Wed, 03 Apr 2024 (15:47 IST)
ನವದೆಹಲಿ: ಕಾಂಗ್ರೆಸ್ ನಲ್ಲಿದ್ದ ಬಾಕ್ಸರ್ ವಿಜೇಂದರ್ ಸಿಂಗ್ ಇದೀಗ ಲೋಕಸಭೆ ಚುನಾವಣೆಗೆ ಕೆಲವೇ ಕ್ಷಣಗಳ ಮೊದಲು ಬಿಜೆಪಿಗೆ ಸೇರಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ವಿಜೇಂದರ್ ಸಿಂಗ್, ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದರು. ಆದರೆ ಆ ಚುನಾವಣೆಯಲ್ಲಿ ಅವರು ಸೋಲುಂಡಿದ್ದರು. ಅದಾದ ಬಳಿಕ ಅವರು ರಾಜಕೀಯದಲ್ಲಿ ಅಷ್ಟೊಂದು ಸಕ್ರಿಯರಾಗಿರಲಿಲ್ಲ. ಇದೀಗ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಜಾಟ್ ಸಮುದಾಯಕ್ಕೆ ಸೇರಿದ ವಿಜೇಂದರ್ ಸಿಂಗ್ ಹರ್ಯಾಣದಲ್ಲಿ ಪಕ್ಷಕ್ಕೆ ಬಲ ತುಂಬುವ ವಿಶ್ವಾಸವಿದೆ. ಕೆಲವೇ ದಿನಗಳ ಹಿಂದೆ ಜನ ಎಲ್ಲಿ ಬಯಸುತ್ತಾರೋ ನಾನು ಅಲ್ಲಿ ರೆಡಿ ಎಂದು ಟ್ವೀಟ್ ಒಂದನ್ನು ಮಾಡಿದ್ದರು. ತಮಗೆ ನೀಡಿದ ಅವಕಾಶಕ್ಕೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿಗೆ ಧನ್ಯವಾದ ಸಲ್ಲಿಸಿದ್ದರು.
ಈ ಹಿಂದೆ ರಾಹುಲ್ ಗಾಂಧಿಯವರ ಭಾರತ್ ಝೋಡೋ ಯಾತ್ರೆಯಲ್ಲೂ ವಿಜೇಂದರ್ ಸಿಂಗ್ ಸಕ್ರಿಯವಾಗಿ ಭಾಗಿಯಾಗಿದ್ದರು. ಇದೀಗ ಬಿಜೆಪಿ ಸೇರಿದ್ದು, ಯಾವ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ನೋಡಬೇಕಿದೆ.