Webdunia - Bharat's app for daily news and videos

Install App

ಅತ್ಯಾಚಾರಕ್ಕೆ ಯತ್ನಿಸಿದವನನ್ನು ಬಡಿದು ಸಾಯಿಸಿದರು

Webdunia
ಗುರುವಾರ, 30 ಜುಲೈ 2015 (16:20 IST)
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು ಆತನನ್ನು ಮನಬಂದಂತೆ ಥಳಿಸಿ ಹತ್ಯೆಗೈದ ಘಟನೆ ಬಿಹಾರದಲ್ಲಿ ನಡೆದಿದೆ. 

ಸಮಷ್ಠಿಪುರ ಜಿಲ್ಲೆಯಡಿ ಬರುವ, ಉಜಿರ್ಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ಈ ಘಟನೆಯಿಂದಾಗಿ ಗ್ರಾಮದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಉಳಿದ 12 ಜನ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 
 
ವರದಿಗಳ ಪ್ರಕಾರ ಬಾಲಕಿ 12 ವರ್ಷದವಳಾಗಿದ್ದು ಕುರಿಗಳನ್ನು ಮೇಯಿಸಲು ಹೊಲಕ್ಕೆ ಹೋಗಿದ್ದಳು. ಆ ಸಂದರ್ಭದಲ್ಲಿ ಆರೋಪಿ ಆಕೆಯ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ್ದಾನೆ. ಅಪಾಯಕ್ಕೆ ಸಿಲುಕಿದ್ದ ಬಾಲಕಿ ಸಹಾಯಕ್ಕಾಗಿ ಜೋರಾಗಿ ಕೂಗಿಕೊಂಡಿದ್ದಾಳೆ. ಹೊಲಗಳಲ್ಲಿ ಕೆಲಸ ಮಾಡುತ್ತಿದ್ದ ಕೆಲ ಗ್ರಾಮಸ್ಥರಿಗೆ ಬಾಲಕಿಯ ಆರ್ತನಾದ ಕೇಳಿಸಿದೆ. ತಕ್ಷಣ ಬಾಲಕಿಯ ಸಹಾಯಕ್ಕೆ ಧಾವಿಸಿದ ಅವರು ಆರೋಪಿಯನ್ನು ಹಿಡಿದು ಸಾಯುವವರೆಗೂ ಹಿಗ್ಗಾಮುಗ್ಗಾ ಥಳಿಸಿದ್ದಾರೆ. 
 
ಅಷ್ಟೇ ಅಲ್ಲದೇ ಆತನ ಮನೆಯ ಮೇಲೂ ಹಳ್ಳಿಗರು ದಾಳಿ ನಡೆಸಿದ್ದಾರೆ. ವಿಷಯ ತಿಳಿದು ಗ್ರಾಮಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ಶಾಂತಗೊಳಿಸಲು ಪ್ರಯತ್ನಿಸಿದ್ದಾರೆ.  ಮೃತನ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಮಷ್ಠಿಪುರದ ಸರ್ದಾರ್ ಆಸ್ಪತ್ರೆಗೆ ಕಳುಹಿಸಲಾಗಿದೆ. 
 
ಬಾಲಕಿಯ ಮೇಲೆ ಅತ್ಯಾಚಾರವಾಗಿಲ್ಲ. ಆರೋಪಿ ಆಕೆಯ ಮೇಲೆ ಲೈಂಗಿಕ ಶೋಷಣೆ ನಡೆಸಲು ಯತ್ನಿಸಿದ್ದ ಮತ್ತು ಇದನ್ನು ನೋಡಿದ ಗ್ರಾಮಸ್ಥರು ಆತನನ್ನು ಕೊಲೆಗೈದಿದ್ದಾರೆ ಎಂದು ಪೊಲೀಸ್ ಅಧಿಕಾರಿ ಪಂಕಜ್ ಕುಮಾರ್ ತಿಳಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ